Breaking News

‘ಟೊಮೆಟೋ’ ಜ್ವರದ ಭೀತಿ.. ಕರಾವಳಿ ಜಿಲ್ಲೆಯಲ್ಲಿ ಹೈ-ಅಲರ್ಟ್

Spread the love

ಉಡುಪಿ: ಕೇರಳದಲ್ಲಿ ಟೊಮೆಟೋ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳಲ್ಲೂ  ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕೊರೊನಾ ಭೀತಿ ನಡುವೆ ಇದೀಗ ಟೊಮೆಟೋ ಜ್ವರ ಆತಂಕ ಮೂಡಿಸಿದೆ. ಇದರ ನಡುವೆ ಉಡುಪಿ ಜಿಲ್ಲೆಯಲ್ಲಿ ಟೊಮೆಟೋ ಜ್ವರ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾದ ಬೆನ್ನಲ್ಲೇ ಜಿಲ್ಲಾಧಿಕಾರಿ ಕೂರ್ಮಾರಾವ್ ಸ್ಪಷ್ಟನೆ ನೀಡಿದ್ದಾರೆ.

ಈ ವಿಚಾರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು.. ಟೊಮೆಟೋ ಜ್ವರ ಪತ್ತೆಯಾಗಿಲ್ಲ. ಮಕ್ಕಳಲ್ಲಿ ಜ್ವರ ಕಂಡು ಬಂದಾಗ ತಾಂತ್ರಿಕವಾಗಿ ಪರೀಕ್ಷೆ ನಡೆಸಲಾಗುತ್ತದೆ. ಟೊಮೆಟೋ ಜ್ವರಕ್ಕೆ ಹೋಲುವಂತಹ ಒಂದು ಪ್ರಕರಣ ಪತ್ತೆಯಾಗಿತ್ತು. ಮೂರು ತಿಂಗಳ ಹಿಂದೆ ಪ್ರಕರಣ ಪತ್ತೆಯಾಗಿತ್ತು. ಹ್ಯಾಂಡ್ ಅಂಡ್​ ಫೂಟ್ ಲಕ್ಷಣಗಳಿರುವ ಪ್ರಕರಣ ಇದಾಗಿತ್ತು. ಈ ಬಗ್ಗೆ ಆರೋಗ್ಯ ಇಲಾಖೆಗೆ ನಾವು ವರದಿ ಮಾಡಿದ್ದೇವೆ. ಟೊಮೆಟೋ ಜ್ವರ ಮತ್ತು ಈ ಪ್ರಕರಣಕ್ಕೆ ಯಾವುದೇ ಸಂಬಂಧ ಇಲ್ಲ. ಇತ್ತೀಚೆಗೆ ಯಾವುದಾದರೂ ಹೊಸ ಪ್ರಕರಣ ಬಂದಿದೆಯೇ ಅನ್ನೋದ್ರ ಬಗ್ಗೆ ಮಾಹಿತಿ ಸಂಗ್ರಹಿಸುತ್ತೇವೆ. ಖಾಸಗಿ ಕ್ಲಿನಿಕ್ ಗಳಿಂದಲೂ ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದರು.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ