Breaking News

ಫ್ಯಾಟ್‌ ಸರ್ಜರಿ ಎಫೆಕ್ಟ್‌ – ಕಿರುತೆರೆ ನಟಿ ಚೇತನಾ ರಾಜ್‌ ಸಾವು

Spread the love

ಬೆಂಗಳೂರು: ಫ್ಯಾಟ್‌ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ಯುವ ನಟಿ ಚೇತನಾ ರಾಜ್‌ ಮೃತಪಟ್ಟಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ದುರಂತ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ನಟಿ ಕುಟುಂಬ ವಾಸವಿದೆ. ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ನಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಸಾವು ಸಂಭವಿಸಿದೆ ಎನ್ನಲಾಗಿದೆ

ಫ್ಯಾಟ್ ಚಿಕಿತ್ಸೆಗೆಂದು ನಿನ್ನೆ ಬೆಳಗ್ಗೆ ಖಾಸಗಿ ಆಸ್ಪತ್ರೆಗೆ ಆಡ್ಮಿಟ್ ಆಗಿದ್ದರು. ಸಂಜೆ ನಾಲ್ಕು ಗಂಟೆ ಹೊತ್ತಿಗೆ ಸಿರಿಯಸ್‌ ಆಗಿ ಶಂಕರಮಠದ ಕಾಡೇ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ