Breaking News

ಲೋಕಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ; ಹಾಲಿ ಸಂಸದರಿಗೆ ಇಲ್ಲ ಟಿಕೆಟ್; 8 ಕ್ಷೇತ್ರಗಳಲ್ಲಿ ಭಾರಿ ಬದಲಾವಣೆಗೆ ಪ್ಲಾನ್

Spread the love

ಬೆಂಗಳೂರು: ವಿಧಾನಸಭಾ ಚುನಾವಣೆ ಬೆನ್ನಲ್ಲೇ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವ ಬಿಜೆಪಿ ಹಲವು ಮಹತ್ವದ ಬದಲಾವಣೆ ಮಾಡಲು ಯೋಜನೆ ರೂಪಿಸಿದೆ.

2024ರ ಲೋಕಸಭಾ ಚುನಾವಣೆಗೆ ಹೊಸಬರಿಗೆ ಆದ್ಯತೆ ನೀಡಲು ಪ್ಲಾನ್ ಮಾಡಿರುವ ಬಿಜೆಪಿ ಹಿರಿಯ ಸಂಸದರಿಗೆ ಟಿಕೆಟ್ ನೀಡದಿರಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ರಾಜ್ಯದ 8 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆಗೆ ಚಿಂತನೆ ನಡೆಸಿರುವ ಬಿಜೆಪಿ ವರಿಷ್ಠರು, ಹಾಲಿ ಸಂಸದರಿಗೆ ಟಿಕೆಟ್ ಕೊಡದಿರಲು ನಿರ್ಧರಿಸಿದೆ. ಬೆಳಗಾವಿ ಕ್ಷೇತ್ರದ ಹಾಲಿ ಸಂಸದೆ ಮಂಗಲಾ ಅಂಗಡಿ, ವಿಜಯಪುರ ಕ್ಷೇತ್ರದ ರಮೇಶ್ ಜಿಗಜಿಣಗಿ, ಬಾಗಲಕೋಟೆಯ ಸಂಸದ ಪಿ.ಸಿ.ಗದ್ದಿಗೌಡರ್, ಹಾವೇರಿ ಸಂಸದ ಶಿವಕುಮಾರ್ ಉದಾಸಿ, ತುಮಕೂರು ಸಂಸದ ಜಿ.ಎಸ್.ಬಸವರಾಜು, ಚಿಕ್ಕಬಳ್ಳಾಪುರ ಕ್ಷೇತ್ರದ ಬಿ.ಎನ್.ಬಚ್ಚೇಗೌಡ, ಬೆಂಗಳೂರು ಉತ್ತರ ಕ್ಷೇತ್ರದ ಡಿ.ವಿ.ಸದಾನಂದಗೌಡ ಹಾಗೂ ಚಾಮರಾಜನಗರ ಕ್ಷೇತ್ರದ ಹಾಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಬಿಟ್ಟು ಬೇರೆಯವರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಿದೆ.

ಒಟ್ಟಾರೆ ಲೋಕಸಭಾ ಚುನಾವಣೆಯಲ್ಲಿ ಯುವಕರಿಗೆ ಹಾಗೂ ಹೊಸ ಮುಖಗಳಿಗೆ ಮಣೆ ಹಾಕಲು ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ