Breaking News

ನನ್ನ ಗಾಡಿಗೆ ನಾನೇ ಬೆಂಕಿ ಹಚ್ಚುತ್ತೇನೆ- ಅಧಿಕಾರಿಗಳ ಎದುರೇ ಗಾಡಿಗೆ ಬೆಂಕಿ ಹಚ್ಚಿದ ವ್ಯಾಪಾರಿ

Spread the love

ಚಿಕ್ಕಮಗಳೂರು: ನನ್ನ ಗಾಡಿ ಮುಟ್ಟಬೇಡಿ, ನಾನೇ ಬೆಂಕಿ ಹಚ್ಚುತ್ತೇನೆ ಎಂದು ನಗರಸಭೆ ಅಧಿಕಾರಿಗಳ ಎದುರು ವ್ಯಾಪಾರಿ ಗಾಡಿಗೆ ಬೆಂಕಿ ಹಚ್ಚಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ನಗರದ ಮಲ್ಲಂದೂರು ರಸ್ತೆಯ ಬೀದಿಯಲ್ಲಿ ಪ್ರತಿನಿತ್ಯ ಬೀದಿ ವ್ಯಾಪಾರಿಗಳು ವ್ಯಾಪಾರ ಮಾಡಿಕೊಂಡು 200-300 ರೂ. ದುಡಿದು ಕಷ್ಟಪಟ್ಟು ಜೀವನ ನಡೆಸುತ್ತಿದ್ದರು. ಆದರೆ ನಗರಸಭೆ ಅಧಿಕಾರಿಗಳು ರಸ್ತೆ ಬದಿ ವ್ಯಾಪಾರ ನಡೆಸಬಾರದು ಎಂದು ವ್ಯಾಪಾರಿಗಳಿಗೆ ಸೂಚಿಸಿದ್ದರು.

ಈ ರಸ್ತೆಯಲ್ಲೇ ವ್ಯಾಪಾರ ನಡೆಸುತ್ತಿದ್ದವರಲ್ಲಿ ಬಡ ವ್ಯಾಪಾರಿಯೊಬ್ಬ ಹಣ್ಣು ತರಕಾರಿಗಳನ್ನು ಮಾರಾಟ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಇಂದು ಈ ವ್ಯಾಪಾರಿಯ ಗಾಡಿಯನ್ನು ಹೊತ್ತೊಯ್ಯಲು ನಗರಸಭೆ ಸಿಬ್ಬಂದಿ ಬಂದಿದ್ದರು. ಇದರಿಂದ ರೊಚ್ಚಿಗೆದ್ದ ಬಡ ವ್ಯಾಪಾರಿಯು, ನಮ್ಮ ಹೊಟ್ಟೆ ಮೇಲೆ ಹೊಡಿಯುತಿದ್ದೀರಾ, ನಾನೇ ಬೆಂಕಿ ಹಾಕ್ತೀನಿ ಎಂದು ತನ್ನ ಗಾಡಿಗೆ ತಾನೇ ಬೆಂಕಿ ಹಾಕಿ ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ