Breaking News

ಕರಣ್ ಜೋಹಾರ್ @50; ಅದ್ಧೂರಿ ಹುಟ್ಟುಹಬ್ಬಕ್ಕೆ ಯಶ್‌ಗೆ ಆಹ್ವಾನ

Spread the love

ಬಾಲಿವುಡ್‌ನ ಖ್ಯಾತ ನಿರೂಪಕ, ನಿರ್ದೇಶಕ ಮತ್ತು ನಿರ್ಮಾಪಕ ಕರಣ್ ಜೋಹಾರ್ ಇದೇ ತಿಂಗಳು ಮೇ 25ಕ್ಕೆ ಅವರಿಗೆ 50 ವರ್ಷ. ಈ ಬಾರಿಯ ಹುಟ್ಟುಹಬ್ಬವನ್ನು ವಿಶೇಷ ರೀತಿಯಲ್ಲೇ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ ಅವರು ದಕ್ಷಿಣದ ಅನೇಕ ಸ್ಟಾರ್ ನಟರನ್ನು ಮತ್ತು ನಿರ್ದೇಶಕರನ್ನು ತಮ್ಮ ಹುಟ್ಟುಹಬ್ಬದ ಪಾರ್ಟಿಗೆ ಆಹ್ವಾನಿಸುತ್ತಿದ್ದಾರೆ ಎನ್ನುವ ಸುದ್ದಿ ಸಿಕ್ಕಿದೆ.

ಕರಣ್ ಜೋಹಾರ್ ಹುಟ್ಟುಹಬ್ಬವೆಂದರೆ ಬಿಟೌನ್‌ನಲ್ಲಿ ವಿಶೇಷತೆ ಇದ್ದೇ ಇರುತ್ತದೆ. ಬಹುತೇಕ ಬಾಲಿವುಡ್ ಸಿಲೆಬ್ರಿಟಿಗಳು ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುತ್ತಾರೆ. ಈ ಬಾರಿಯ ಸ್ಪೆಷಲ್ ಅಂದರೆ, ಕನ್ನಡದ ಯಶ್, ನಿರ್ದೇಶಕ ಪ್ರಶಾಂತ್ ನೀಲ್, ತೆಲುಗಿನ ಜೂನಿಯರ್ ಎನ್‌ಟಿಆರ್‌ ಹಾಗೂ ರಾಜಮೌಳಿ ಸೇರಿದಂತೆ ಹಲವು ಸಿಲೆಬ್ರಿಟಿಗಳನ್ನು ಆಹ್ವಾನಿಸಿದ್ದಾರಂತೆ

ರಣ್ ಜೋಹಾರ್ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಹೋಸ್ಟ್ ಮಾಡಿದ್ದರು. ಆ ಮೂಲಕ ದಕ್ಷಿಣದ ಮೊದಲ ಕಾರ್ಯಕ್ರಮದಲ್ಲಿ ಅವರು ನಿರೂಪಕರಾಗಿ ಕಾಣಿಸಿಕೊಂಡಿದ್ದರು. ಅಲ್ಲಿಂದ ಯಶ್ ಮತ್ತು ಅವರ ಮಧ್ಯ ಒಂದೊಳ್ಳೆ ಬಾಂಧವ್ಯವೂ ಏರ್ಪಟ್ಟಿದೆ. ಇದೆಲ್ಲ ಕಾರಣಕ್ಕಾಗಿ ಈ ಬಾರಿ ಯಶ್ ಅವರು ಕರಣ್ ಜೋಹಾರ್ ಅವರ ಬರ್ತ್‌ಡೇ ಪಾರ್ಟಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಇದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ