ಹಾವೇರಿ: ಐವತ್ತೈದು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪಿಡಿಓ ಎಸಿಬಿ ಬಲೆಗೆ ಬಿದ್ದ ಘಟನೆ ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮ ಪಂಚಾಯತಿ ನಡೆದಿದೆ.
ಪಿಡಿಓ ಸವಿತಾ ಯರೆಸೀಮೆ ಗ್ರಾಮ ಪಂಚಾಯತಿಯಲ್ಲಿಯೇ ಹಣ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾಳೆ. ಜಮೀನುಗಳ ಖಾತೆ ಬದಲಾವಣೆಗೆ ಮಾಡುವುದಕ್ಕಾಗಿ ಹಾವೇರಿ ನಗರದ ನಿವಾಸಿ ಮುರುಗೇಶ ಎಂಬುವರಿಂದ ಐವತ್ತೈದು ಸಾವಿರ ರುಪಾಯಿ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ
ಎಸಿಬಿ ಡಿವೈಎಸ್ಪಿ ಗೋಪಿ ಬಿ.ಆರ್. ಸಿಪಿಐ ಬಸವರಾಜ ಬುದ್ನಿ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಹಾವೇರಿ ಎಸಿಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Laxmi News 24×7