Breaking News

ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಭೀತಿ; ಚುನಾವಣಾ ಸಿದ್ದತೆ ಆರಂಭಿಸಿದ ಕೈ ಪಡೆ

Spread the love

ಬೆಂಗಳೂರು: ಬಿಜೆಪಿಯ ರೀತಿ ಕಾಂಗ್ರೆಸ್ ನಲ್ಲೂ ಈಗ ಚುನಾವಣಾ ಗೆಲುವಿಗೆ ಲೆಕ್ಕಾಚಾರಗಳು ಪ್ರಾರಂಭವಾಗಿದ್ದು, ಹಾಲಿ ಶಾಸಕರ ಪೈಕಿ ಕೆಲವರಿಗೆ ಈ ಬಾರಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.

ಗೆಲ್ಲುವ ಸಾಮರ್ಥ್ಯ ಹೊಂದಿರುವವರಿಗೆ ಮಾತ್ರ ಮಣೆ ಹಾಕಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ಸೋಲುವ ಸಾಧ್ಯತೆ ಇರುವ ಹಾಲಿ ಶಾಸಕರಿಗೆ ಟಿಕೆಟ್ ಕೊಡದಿರುವ ಬಗ್ಗೆ ಚರ್ಚೆ ನಡೆದಿದೆ.

 

ಕೆಲಸ ಮಾಡದ ಶಾಸಕರ ಕ್ಷೇತ್ರಗಳ ಮೇಲೆ ಹೆಚ್ಚಿನ ಗಮನಹರಿಸಲು ಮುಂದಾಗಿರುವ ನಾಯಕರು 2023ರ ವಿಧಾನಸಭಾ ಚುನಾವಣೆಯನ್ನು ಈಗಿನಿಂದಲೇ ಗಂಭೀರವಾಗಿ ಪರಿಗಣಿಸಿದ್ದಾರೆ.

ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕೆಂಬ ಸಂಕಲ್ಪ ಹೈಕಮಾಂಡ್ ನಡೆಸಿದೆ. ಈ ನಿಟ್ಟಿನಲ್ಲಿ ಕೆಲವೊಂದು ಬದಲಾವಣೆ ಮಾಡುವ ಕುರಿತು ಮಾತುಕತೆ ನಡೆದಿದೆ.

ಆದರೆ ಮುಂದುವರೆದ ಭಾಗವಾಗಿ ಕೆಲಸ ಮಾಡದ ಸೋಲುವ ಶಾಸಕರಿಗೆ ಟಿಕೆಟ್ ಕೊಡದಿರಲು‌ ಚಿಂತನೆ ನಡೆಸಲಾಗಿದ್ದು, ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಸರ್ವೆ ನಡೆಸಲಾಗುತ್ತಿದೆ 


Spread the love

About Laxminews 24x7

Check Also

ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ

Spread the love ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ. ಯಾವುದೇ ದೂರದೃಷ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ