Breaking News

ಬೇರೆಯವರ ಕೈಯಿಂದ ಕೇಕ್‌ ತಿನ್ನಿಸಿದ ಪ್ರಿಯಾಂಕಾ; ಡಿಕೆಶಿ ಬಗ್ಗೆ ಬಿಜೆಪಿ ಲೇವಡಿ

Spread the love

ದೆಹಲಿ: ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹುಟ್ಟುಹಬ್ಬ. ಅವರು ದೆಹಲಿಯಲ್ಲಿದ್ದುದರಿಂದ ದೆಹಲಿಯಲ್ಲಿ ಕಾಂಗ್ರೆಸ್‌ ಕಚೇರಿಯಲ್ಲೇ ಹುಟ್ಟುಹಬ್ಬ ಆಚರಿಸಲಾಗಿದೆ. ಈ ವೇಳೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಕೂಡಾ ಹಾಜರಿದ್ದರು. ಡಿ.ಕೆ.ಶಿವಕುಮಾರ್‌ಗೆ ಕೇಕ್‌ ತಿನ್ನಿಸಲು ಕೇರ್‌ ಎತ್ತಿಕೊಂಡ ಪ್ರಿಯಾಂಕಾ ಗಾಂಧಿ, ಅದನ್ನು ಬೇರೆ ನಾಯಕರೊಬ್ಬರ ಕೈಗೆ ಕೊಟ್ಟು ಅವರಿಂದ ಡಿ.ಕೆ.ಶಿವಕುಮಾರ್‌ಗೆ ಕೇಕ್‌ ತಿನ್ನಿಸಿದರು.

 

ಈ ವಿಡಿಯೋವನ್ನು ಹಂಚಿಕೊಂಡಿರುವ ರಾಜ್ಯ ಬಿಜೆಪಿ, ಡಿ.ಕೆ.ಶಿವಕುಮಾರ್‌ ಅವರನ್ನು ಲೇವಡಿ ಮಾಡಿದೆ.

ಡಿ.ಕೆ.ಶಿವಕುಮಾರ್ ಅವರೇ, ಅವರ ಕೈಗೆ ಬಂದ ತುತ್ತು, ನಿಮ್ಮ ಬಾಯಿಗೆ ಬರುವುದಿಲ್ಲ. ಈ ಸತ್ಯವನ್ನು ಈಗಲಾದರೂ ಅರಿತುಕೊಳ್ಳಿ. ಕಾಣದ ಕೈಗಳು ನಿಮ್ಮ ಅಧಿಕಾರವನ್ನು ನಿಮ್ಮ ಮುಂದೆಯೇ ಹೀಗೆಯೇ ಕಿತ್ತುಕೊಳ್ಳುತ್ತಾರೆ. ನಿಮ್ಮ ಧನ ಬಲ ಮಾತ್ರ ಬಳಸಿಕೊಳ್ಳುತ್ತಾರೆ. ಅಧಿಕಾರದ ಸಮಯದಲ್ಲಿ ದೂರ ಇಡುತ್ತಾರೆ. ಅಸಹಾಯಕಡಿಕೆಶಿ ಇಷ್ಟೊಂದು ದುರ್ಬಲವೇ? ಎಂದು ಪ್ರಶ್ನೆ ಮಾಡಿದೆ.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ