Breaking News

ಪ್ರಧಾನಿಯಾಗಿ ಮೋದಿಯ ದಾಖಲೆಗಳು ಅವರು ʼಹಿಂದೂ ವಿರೋಧಿʼ ಎಂದು ಸೂಚಿಸುತ್ತದೆ: ಸುಬ್ರಮಣಿಯನ್‌ ಸ್ವಾಮಿ

Spread the love

ಹೊಸದಿಲ್ಲಿ: ಬಿಜೆಪಿ ಪಕ್ಷದ ಹಿರಿಯ ನಾಯಕನಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಸರಕಾರದ ಕೆಲ ಧೋರಣೆಗಳನ್ನು ಕಟುವಾಗಿ ಟೀಕಿಸುವ ಸುಬ್ರಮಣಿಯನ್‌ ಸ್ವಾಮಿ ಇದೀಗ ಟ್ವೀಟ್‌ ಮೂಲಕ ಪ್ರಧಾನಿ ನರೇಂದ್ರ ಮೋದಿಯ ಆಡಳಿತ ವೈಖರಿಗಳಿ ಹಿಂದೂ ವಿರೋಧಿಯಾಗಿವೆ ಎಂದು ಹೇಳಿಕೆ ನೀಡಿದ್ದಾರೆ.

 

ಟ್ವಿಟರ್‌ ನಲ್ಲಿ “ಬಿಜೆಪಿ ಪಕ್ಷವು ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಎತ್ತಿ ಹಿಡಿಯುವುದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಸಾಧನೆಗಳು ಹಿಂದೂ ವಿರೋಧಿಯಾಗಿದೆ. ಇದಕ್ಕೆ ಉದಾಹರಣೆಗಳೆಂದರೆ, ರಾಮಮಂದಿರ ಮೇಲಿನ ಸುಪ್ರೀಂ ಕೋರ್ಟ್‌ ತೀರ್ಪನ್ನು ವಿಳಂಬಿಸಲು ಪ್ರಯತ್ನಿಸುವುದು, ರಾಮಸೇತುವಿನ ಪ್ರಾಚೀನ ಪರಂಪರೆಯ ಸ್ಥಾನಮಾನಗಳ ಕುಸಿತ, ಉತ್ತರಾಖಂಡ್‌ ನ ದೇವಾಲಯಗಳ ಸ್ವಾಧೀನ, 1991ರ ಪೂಜಾಸ್ಥಳಗಳ ಕಾಯ್ದೆಯನ್ನು ಹಿಂಪಡೆಯಲು ನಿರಾಕರಿಸಲಾಗಿದೆ” ಎಂದು ಬರೆದಿದ್ದಾರೆ.


Spread the love

About Laxminews 24x7

Check Also

ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು,

Spread the loveಮೈಸೂರು: ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಸುರಕ್ಷತಾ ಕ್ರಮವಾಗಿ ಕಂಪನಿಯ ಟ್ರೈನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ