Breaking News

31 ವರ್ಷಗಳ ನಂತರ ರಾಜೀವ್ ಗಾಂಧಿ ಹಂತಕ ಜೈಲಿನಿಂದ ಬಿಡುಗಡೆ

Spread the love

ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆಗೈದಿದ್ದ ಹಂತಕ ಪೆರಾರಿವಾಲನ್‌ನನ್ನು 31 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಗೊಳಿಸುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ.

31 ವರ್ಷಗಳ ಕಾಲ ಜೈಲಿನಲ್ಲಿದ್ದ ಪೆರಾರಿವಾಲನ್ ತಮಿಳುನಾಡು ಸರ್ಕಾರದ ಮನವಿ ಮೇರೆಗೆ ಬಿಡುಗಡೆಗೊಂಡಿದ್ದಾರೆ. ರಾಜೀವ್ ಗಾಂಧಿ ಹತ್ಯೆಯಲ್ಲಿ ಶಾಮೀಲಾಗಿದ್ದ ಏಳು ಮಂದಿಯಲ್ಲಿ ಒಬ್ಬರಾಗಿದ್ದ ಪೆರಾರಿವಾಲನ್ 30 ವರ್ಷಗಳಿಗೂ ಅಧಿಕ ಕಾಲ ಸೆರೆಮನೆ ವಾಸ ಅನುಭವಿಸಿದ್ದರು.

ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಹಾಗೂ ಬಿ. ಆರ್. ಗವಾಯಿ ಅವರನ್ನೊಳಗೊಂಡ ನ್ಯಾಯಪೀಠವು ಪೆರಾರಿವಾಲ್‍ನನ್ನು ಜೈಲಿನಿಂದ ಬಿಡುಗಡೆಗೊಳಿಸುವಂತೆ ಆದೇಶಿಸಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ