Breaking News

ಪಿಎಸ್‍ಐ ನೇಮಕಾತಿ ಅಕ್ರಮ ಭೇದಿಸಲು ಸಹಾಯವಾಯ್ತು ಫೋಟೋಶೂಟ್

Spread the love

ಕಲಬುರಗಿ: ಪಿಎಸ್‍ಐ ನೇಮಕಾತಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಯಶಸ್ಸು ಕಂಡ ನಂತರ ಕಲಬುರಗಿಯ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಿಬ್ಬಂದಿಗಳು ಫೋಟೋಶೂಟ್ ಮಾಡಿಸಿದ್ದರು. ಈಗ ಈ ಫೋಟೋಶೂಟ್ ಅಕ್ರಮ ಭೇದಿಸಲು ಅಧಿಕಾರಿಗಳಿಗೆ ಸಹಾಯವಾಗಿದೆ.

ಪಿಎಸ್‍ಐ ಪರೀಕ್ಷೆ ಬಳಿಕ ಎಲ್ಲ ಸಿಬ್ಬಂದಿಗೆ 4 ಸಾವಿರ ಹೆಚ್ಚಿನ ಭತ್ಯೆಯನ್ನು ಶಾಲೆಯ ಒಡತಿ ದಿವ್ಯಾ ಹಾಗರಗಿ ನೀಡಿದ್ದರು. ಆ ಭತ್ಯೆ ನೀಡುವ ಸಂದರ್ಭದಲ್ಲಿ ನೆನಪಿನ ಸ್ಮರಣಾರ್ಥ ಇದೊಂದು ಐತಿಹಾಸಿಕ ದಿನವೆಂದು ಎಲ್ಲರಿಗೂ ಒಟ್ಟಿಗೆ ಕೂಡಿಸಿ ಫೋಟೋಶೂಟ್ ಮಾಡಿಕೊಂಡಿದ್ದರು.

ಫೋಟೋಶೂಟ್‍ನಲ್ಲಿ ಬಹುತೇಕರು ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಪರಿಣಾಮ ಇದೀಗ ಸಿಐಡಿ ಬಲೆಗೆ ಬಿದ್ದಿದ್ದಾರೆ. ಈಗ ಅಕ್ರಮದ ನೇಮಕಾತಿ ಪ್ರಕರಣ ಭೇಧಿಸಲು ಈ ಫೋಟೋಶೂಟ್ ಸಹಾಯಕವಾಗಿದೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ