Breaking News

‘ದ್ವಿತೀಯ PUC ಪರೀಕ್ಷೆ’ ಬರೆದ ವಿದ್ಯಾರ್ಥಿಗಳೇ ಗಮನಿಸಿ : ‘ಪ್ರಶ್ನೆಪತ್ರಿಕೆ’ಗಳ ‘ಮಾದರಿ ಉತ್ತರ’ ಪ್ರಕಟ |

Spread the love

ಬೆಂಗಳೂರು: ಏಪ್ರಿಲ್ 22 ರಿಂದ ಮೇ.18ರವರೆಗೆ ನಡೆದಂತ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ( Karnataka Second PU Exam ) ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರವನ್ನು ಪಿಯು ಬೋರ್ಡ್ ( PU Board ) ಪ್ರಕಟಿಸಿದೆ. ಈ ಮಾದರಿ ಉತ್ತರಗಳಿಗೆ ಮೇ.20ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ.

 

ಈ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, 2022ರ ಏಪ್ರಿಲ್, ಮೇ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ದಿನಾಂಕ 18-05-2022ರಂದು ನಿಗದಿ ಪಡಿಸಿದ್ದ ವೇಳಾಪಟ್ಟಿಯಂತೆ ಮುಕ್ತಾಯವಾಗಿರುತ್ತದೆ ಎಂದು ತಿಳಿಸಿದೆ.

ಮೌಲ್ಯಮಾಪನ ಪ್ರಕ್ರಿಯೆಯನ್ನು ಈಗಾಗಲೇ ಪ್ರಾರಂಭಿಸಲು ಎಲ್ಲಾ ವಿಷಯಗಳ ಪ್ರಶ್ನೆ ಪತ್ರಿಕೆಗಳಿಗೆ ಮಾದರಿ ಉತ್ತರಗಳನ್ನು ಸಿದ್ಧಪಡಿಸಿ, ದಿನಾಂಕ 18-05-2022ರ ಇಂದು ಇಲಾಖಾ ವೆಬ್ ಸೈಟ್ pue.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದೆ.

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯನ್ನು ಬರೆದಂತ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ, ಮಾದರಿ ಉತ್ತರಗಳನ್ನು ವೀಕ್ಷಿಸಬಹುದಾಗಿದೆ. ಮಾದರಿ ಉತ್ತರಗಳಿಗೆ ಆಕ್ಷೇಪಣೆಗಳಿದ್ದರೇ, ದಿನಾಂಕ 20-05-2022ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸುವಂತೆ ತಿಳಿಸಿದೆ.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ