Breaking News

ಚಿಕ್ಕಬಳ್ಳಾಪುರದ ಒಂದೇ ಶಾಲೆಯ ಮೂವರು ರಾಜ್ಯಕ್ಕೆ ಪ್ರಥಮ 625 ಅಂಕಗಳನ್ನು ಪಡೆದಿದ್ದಾರೆ.

Spread the love

ಚಿಕ್ಕಬಳ್ಳಾಫುರ: ಜಿಲ್ಲೆಯ ಒಂದೇ ಶಾಲೆಯ ಮೂವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿಯ ಬಿಜಿಎಸ್ ಶಾಲೆಯ ಜಯಂತಿ ಬಿ ಗೌಡ, ಲೀಸಾ ಎಚ್.ಸಿ, ಪ್ರೀತಿ ಎಸ್ 625 ಅಂಕಗಳನ್ನು ಪಡೆದಿದ್ದಾರೆ. ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿನಿಯರನ್ನು ಶಾಲಾ ಆಡಳಿತ ಮಂಡಳಿ ಅಭಿನಂದಿಸಿದೆ.

ಶಿಡ್ಲಘಟ್ಟದ ಬಿಜಿಎಸ್ ಶಾಲೆಯ ಜಿ ಹರ್ಷಿತಾ ಹಾಗೂ ಗೌರಿಬಿದನೂರಿನ ಬಿಜಿಎಸ್ ಶಾಲೆಯ ತೃಪ್ತಿ ಕೆಸಿ 625 ಅಂಕಗಳನ್ನು ಪಡೆದಿದ್ದಾರೆ.

ಈ ಬಾರಿ ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ಪ್ರಕಟವಾಗಿದೆ.  10 ವರ್ಷಗಳಲ್ಲೇ ಇದು ದಾಖಲೆ ಫಲಿತಾಂಶವಾಗಿದೆ.

ಶೇ. 81.03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಶೇ.90.29 ವಿದ್ಯಾರ್ಥಿನಿಯರು ಪಾಸ್‌ ಆಗಿದ್ದಾರೆ. 145 ವಿದ್ಯಾರ್ಥಿಗಳು 625 ಅಂಕ ಪಡೆದಿರುವುದು ವಿಶೇಷ. ಸರ್ಕಾರಿ ಶಾಲೆಯ 21, ಅನುದಾನಿತ ಶಾಲೆಯ 8, ಖಾಸಗಿ ಶಾಲೆಯ 116 ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ