Breaking News

ಶಿಲ್ಪಾ ಪತಿಗೆ ಮತ್ತೆ ಕಾನೂನು ಸಂಕಟ

Spread the love

ಬಾಲಿವುಡ್ ಬ್ಯೂಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಾಮಿ ರಾಜ್ ಕುಂದ್ರಾ ಅವರನ್ನು ಈ ಹಿಂದೆ ಅಶ್ಲೀಲ ಚಿತ್ರಗಳ ನಿರ್ಮಾಣ ಹಿನ್ನೆಲೆ ಪೊಲೀಸರು ಅರೆಸ್ಟ್ ಆಗಿದ್ದರು. ಕೆಲವು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ಕುಂದ್ರಾ, ಡಿಸೆಂಬರ್‍ನಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಆದರೆ ಮತ್ತೆ ಕುಂದ್ರಾಗೆ ಕಾನೂನು ಸಂಕಟ ಪ್ರಾರಂಭವಾಗಿದ್ದು, ಅವರ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಕೇಸ್ ದಾಖಲಿಸಿದ್ದಾರೆ.

ಅಶ್ಲೀಲ ಚಿತ್ರಗಳ ನಿರ್ಮಾಣ ಕೇಸ್ ಬೆಳವಣಿಗೆಗಳಿಂದಾಗಿ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾರ ಘನತೆ ಕುಸಿದಿತ್ತು. ಇದರಿಂದ ಈ ಜೋಡಿ ಸುಧಾರಿಕೊಳ್ಳುತ್ತಿದೆ. ಈ ನಡುವೆ ರಾಜ್‍ಕುಂದ್ರಾಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ‘ಪೋರ್ನ್ ರಾಕೆಟ್ ಕೇಸ್’ನಲ್ಲಿ ಇಡಿದ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. 

ಈ ವಿಚಾರಣೆಯಲ್ಲಿ ಕುಂದ್ರಾ ಅವರಿಗೆ ಹಣಕಾಸು ವರ್ಗಾವಣೆ ಆಯಾಮದ ಮೇಲೆ ಇಡಿ ಅಧಿಕಾರಿಗಳು ಪ್ರಶ್ನೆಗಳನ್ನ ಕೇಳಲಿದ್ದಾರೆ. ಕೆಲವು ವರದಿಗಳ ಪ್ರಕಾರ ಕಳೆದ ವಾರವೇ ಕುಂದ್ರಾ ವಿರುದ್ಧ ಇಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಣ ವರ್ಗಾವಣೆಗೆ ಸಂಬಂಧಿಸಿ ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಶಾಂತಾಯಿ ವೃದ್ಧಾಶ್ರಮದಲ್ಲಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಪಿಂಕ್ ವಾರಿಯರ್ಸ್ ತಂಡದಿಂದ ಜಾಗೃತಿಪರ ನಾಟಕ ಪ್ರದರ್ಶನ

Spread the love ಶಾಂತಾಯಿ ವೃದ್ಧಾಶ್ರಮದಲ್ಲಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಪಿಂಕ್ ವಾರಿಯರ್ಸ್ ತಂಡದಿಂದ ಜಾಗೃತಿಪರ ನಾಟಕ ಪ್ರದರ್ಶನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ