Breaking News

ವಿಧಾನಪರಿಷತ್ ಚುನಾವಣೆ: ಅಧಿಸೂಚನೆ ಪ್ರಕಟ

Spread the love

ಬೆಳಗಾವಿ: ಕರ್ನಾಟಕ ವಾಯವ್ಯ ಪಧವೀಧರು ಮತ್ತು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನಪರಿಷತ್ತಿಗೆ ತಲಾ ಒಬ್ಬ ಸದಸ್ಯರನ್ನು ಚುನಾಯಿಸಲು ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿಯಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಗುರುವಾರ ಅಧಿಸೂಚನೆ ಹೊರಡಿಸಿದ್ದಾರೆ.

 

ನಾಮಪತ್ರಗಳನ್ನು ಉಮೇದುವಾರರು ಅಥವಾ ಅವರ ಸೂಚಕರು ಚುನಾವಣಾಧಿಕಾರಿ ಕಚೇರಿ ಅಥವಾ ಸಹಾಯಕ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಮೇ 26ರೊಳಗೆ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ (ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ) ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ನಾಮಪತ್ರದ ನಮೂನೆಗಳನ್ನು ಚುನಾವಣಾಧಿಕಾರಿ ಕಚೇರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಕಾರ್ಯಾಲಯದಲ್ಲಿ ಕಚೇರಿ ವೇಳೆಯಲ್ಲಿ ಪಡೆದುಕೊಳ್ಳಬಹುದಾಗಿದೆ. ಸಲ್ಲಿಕೆಯಾದ ನಾಮಪತ್ರಗಳನ್ನು ಬೆಳಗಾವಿಯ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಮೇ 27ರಂದು ಬೆಳಿಗ್ಗೆ 11ಕ್ಕೆ ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವ ತಿಳಿವಳಿಕೆ ಪತ್ರವನ್ನು ಉಮೇದುವಾರ ಅಥವಾ ಅವರ ಯಾರೇ ಸೂಚಕರು ಅಥವಾ ಅದನ್ನು ಸಲ್ಲಿಸಲು ಉಮೇದುವಾರನಿಂದ ಲಿಖಿತವಾಗಿ ಅಧಿಕೃತವಾದ ಚುನಾವಣಾ ಏಜೆಂಟರು ಕಚೇರಿಗಳಿಗೆ ಮೇ.30ರಂದು ಮಧ್ಯಾಹ್ನ 3ರ ಒಳಗೆ ಸಲ್ಲಿಸಬೇಕು.


Spread the love

About Laxminews 24x7

Check Also

ತಾಯಿಯೊಂದಿಗೆ ಚಿನ್ನದ ಹುಡುಗ ಕಾರ್ತಿಕ್

Spread the loveಬೆಳಗಾವಿ: ತಾಯಿ ಟೈಲರಿಂಗ್ ಕೆಲಸ ಮಾಡುತ್ತಾರೆ. ತಂದೆ ಇಲ್ಲ. ತಾಯಿಗೆ-ಮಗ, ಮಗನಿಗೆ-ತಾಯಿನೇ ಎಲ್ಲಾ. ಮನೆಯಲ್ಲಿ ಬಡತನ ಹಾಸು ಹೊಕ್ಕಾಗಿತ್ತು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ