Breaking News

ಭ್ರಷ್ಟ ಬಿಜೆಪಿ ನಾಯಕರ ಆಸ್ತಿ ಹರಾಜು ಹಾಕಿ, ಆ ಹಣದಿಂದ ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಕೊಡಬೇಕು’ : A.A.P. ಮೋಹನ್‌ ದಾಸರಿ

Spread the love

ಬೆಂಗಳೂರು: ‘ಭ್ರಷ್ಟ ಬಿಜೆಪಿ ನಾಯಕರ ಆಸ್ತಿ ಹರಾಜು ಹಾಕಿ, ಆ ಹಣದಿಂದ ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಕೊಡಬೇಕು’ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್‌ ದಾಸರಿ ಹೇಳಿದರು.

ಮಾಧ್ಯಮಗಳ ಜತೆ ಬುಧವಾರ ಮಾತನಾಡಿದ ಅವರು,’ಬೆಂಗಳೂರಿನ ಜನ ಮಳೆಗೆ ತತ್ತರಿಸಿ, ಇಬ್ಬರು ಪ್ರಾಣ ಕಳೆದುಕೊಂಡಿರುವುದಕ್ಕೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಬೇಜವಾಬ್ದಾರಿಯೇ ಕಾರಣ’ ಎಂದು ದೂರಿದರು.

 

‘ಬಿಜೆಪಿ ಸರ್ಕಾರ ರಾಜಕಾಲುವೆ ಹೆಸರಿನಲ್ಲಿ ಸಾವಿರಾರು ಕೋಟಿ ಲೂಟಿ ಮಾಡಿರುವ ಪರಿಣಾಮ, ಜನರು ರಸ್ತೆಗಳಲ್ಲಿ ಓಡಾಡಲು ದೋಣಿ ಬಳಸಬೇಕಾದ ಪರಿಸ್ಥಿತಿ ಎದುರಾಗಿದೆ. ಮಳೆಗಾಲ ಬಂದರೆ ಜೀವ ಭಯದಲ್ಲೇ ಜನ ದಿನ ಕಳೆಯುತ್ತಿದ್ದು, ಮಂಗಳವಾರ ರಾತ್ರಿ ಸುರಿದ ಮಳೆಗೆ ಇಬ್ಬರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ