Breaking News

ಉಂಡ ಮನೆಗೆ ದ್ರೋಹ ಬಗೆಯುವುದಕ್ಕೆ ಸೂಕ್ತ ಉದಾಹರಣೆ ಎಂದರೆ ಅದು ಸಿದ್ದರಾಮಯ್ಯ’ ಎಂದ ಬಿಜೆಪಿ

Spread the love

ಬೆಂಗಳೂರು: ‘ಉಂಡ ಮನೆಗೆ ದ್ರೋಹ ಬಗೆಯುವುದಕ್ಕೆ ಸೂಕ್ತ ಉದಾಹರಣೆ ಎಂದರೆ ಅದು ಸಿದ್ದರಾಮಯ್ಯ’ ಎಂದು ಬಿಜೆಪಿ ಟೀಕಿಸಿದೆ.

ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ ವಿರುದ್ಧ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲಿಗರು ಕೆಲಸ ಮಾಡುತ್ತಿದ್ದಾರೆ ಎಂಬ ವರದಿಯೊಂದನ್ನು ಉಲ್ಲೇಖಿಸಿ ಬಿಜೆಪಿಯ ರಾಜ್ಯ ಘಟಕವು ಸರಣಿ ಟ್ವೀಟ್ ಮಾಡಿದ್ದು, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ.

‘ರಾಜಕಾರಣದಲ್ಲಿ ನಂಬಿಕೆದ್ರೋಹಿಗಳು ಹಾಗೂ ಬೆನ್ನಿಗೆ ಚೂರಿ ಹಾಕುವ ವ್ಯಕ್ತಿತ್ವವನ್ನು ಪ್ರತಿಬಿಂಬಿಸುವ ಕೆಲವು ಸೃಷ್ಟಿಗಳಿವೆ. ಮಹಾಭಾರತದ ಶಕುನಿ, ಬ್ರಿಟಿಷ್‌ ಕಾಲದ ಮೀರ್ ಸಾದಿಕ್, ಚನ್ನಮ್ಮನಿಗೆ ದ್ರೋಹ ಬಗೆದ ಮಲ್ಲಪ್ಪ ಇತ್ಯಾದಿ. ಇವರೆಲ್ಲರಿಗೂ ಸರಿಸಮನಾಗಿ ನಿಲ್ಲಬಲ್ಲ ವ್ಯಕ್ತಿ ಎಂದರೆ ಅದು ಸಿದ್ದರಾಮಯ್ಯ!’ ಎಂದು ಬಿಜೆಪಿ ಟೀಕಿಸಿದೆ.

‘2013ರ ಚುನಾವಣೆಯಲ್ಲಿ ಮುಖ್ಯಮಂತ್ರಿ ರೇಸ್‌ಗೆ ಅಡ್ಡಿಯಾಗುತ್ತಾರೆಂಬ ಕಾರಣಕ್ಕೆ ಅಂದಿನ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಅವರನ್ನು ಸಿದ್ದರಾಮಯ್ಯ ಕುತಂತ್ರದಿಂದ ಸೋಲಿಸಿದರು.‌ 2023ಕ್ಕೂ ನಿಮ್ಮದು ಇದೇ ತಂತ್ರವೇ? ಇದು ಮೀರ್‌ ಸಾದಿಕ್‌ತನವಲ್ಲದೆ ಮತ್ತೇನು ಸಿದ್ದರಾಮಯ್ಯನವರೇ’ ಎಂದು ಬಿಜೆಪಿ ಪ್ರಶ್ನಿಸಿದೆ.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ