Breaking News

ಏಣಗಿ ಬಾಳಪ್ಪ ಕುರಿತ ಕೃತಿ ಮೇ 22ರಂದು ಬಿಡುಗಡೆ

Spread the love

ಬೆಳಗಾವಿ: ಜಿಲ್ಲಾ ಲೇಖಕಿಯರ ಸಂಘ, ರಂಗ ಸಂಪದ ಹಾಗೂ ಚಂದ್ರಕಾಂತ ಕುಸನೂರ ಸಾಂಸ್ಕೃತಿಕ ಪ್ರತಿಷ್ಠಾನದ ಸಹಯೋಗದಲ್ಲಿ ರಂಗಕರ್ಮಿ ಏಣಗಿ ಬಾಳಪ್ಪ ಅವರ ರಂಗಾನುಭವಗಳ ಕುರಿತು ಗಣೇಶ ಅಮೀನಗಡ ನಿರೂಪಿಸಿದ ‘ಬಣ್ಣದ ಬದುಕಿನ ಚಿನ್ನದ ದಿನಗಳು’ ಕೃತಿಯ 8ನೇ ಮುದ್ರಣದ ಬಿಡುಗಡೆ ಸಮಾರಂಭವನ್ನು ಇಲ್ಲಿನ ರಾಣಿ ಚನ್ನಮ್ಮ ವೃತ್ತ ಸಮೀಪದ ಕನ್ನಡ ಸಾಹಿತ್ಯ ಭವನದಲ್ಲಿ ಮೇ 22ರಂದು ಸಂಜೆ 4ಕ್ಕೆ ಆಯೋಜಿಸಲಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಸರಜೂ ಕಾಟ್ಕರ್‌ ಬಿಡುಗಡೆ ಮಾಡಲಿದ್ದಾರೆ. ಸಾಹಿತಿ ಬಿ.ಎಸ್. ಗವಿಮಠ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಹೇಮಾ ಸೊನೊಳ್ಳಿ, ರಂಗಸಂಪದ ಅಧ್ಯಕ್ಷ ಅರವಿಂದ ಕುಲಕರ್ಣಿ, ಲೇಖಕಿ ಆಶಾ ಕಡಪಟ್ಟಿ ಪಾಲ್ಗೊಳ್ಳಲಿದ್ದಾರೆ ಎಂದು ಏಣಗಿ ಸುಭಾಷ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಶಾಸಕ ಭರಮಗೌಡ (ರಾಜು) ಕಾಗೆಗೆ ಒಲಿದು ಬಂದ ಅದೃಷ್ಟ

Spread the love  ಸಚಿವ ಸತೀಶ್ ಜಾರಕಿಹೊಳಿಯವರ ಮಧ್ಯಸ್ಥಿಕೆಯಲ್ಲಿ ನಡೆದ ಕಾಗವಾಡ ಕ್ಷೇತ್ರದ ಅವಿರೋಧ ಆಯ್ಕೆ- ಶಾಸಕ ಬಾಲಚಂದ್ರ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ