Breaking News

ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು

Spread the love

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ಬೆಳಗಾವಿ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಾಯಣ್ಣನ ಮೂರ್ತಿಗೆ ಕಲ್ಲು ತೂರಿ, ಸ್ಥಳದಿಂದ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಘಟನೆಯಲ್ಲಿ ರಾಯಣ್ಣನ ಮೂರ್ತಿಯ ಕಾಲಿನ ಭಾಗದಲ್ಲಿ ಹಾನಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ರಾಯಣ್ಣ ಅಭಿಮಾನಿಗಳು ತೀವ್ರ ಆಕ್ರೋಶವನ್ನು ಹೊರ ಹಾಕಿದ್ದಾರೆ. 

ಬೆಂಡಿಗೇರಿ ಗ್ರಾಮಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ರಾಯಣ್ಣನ ಮೂರ್ತಿಗೆ ಕಲ್ಲು ತೂರಿರುವ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಘಟನೆಯಿಂದ ಬೆಂಡಿಗೇರಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ