ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಫ್ಲೈಓವರ್‌ನಲ್ಲಿ ಇಂದು ಮುಂಜಾನೆಯೇ ಬೈಕ್ ಸವಾರ ಮೃತಪಟ್ಟಿದ್ದಾನೆ.
ಬೆಂಗಳೂರಿನ ಜಕ್ಕೂರು ಏರೊಡ್ರಮ್ ಬಳಿ ಘಟನೆ ನಡೆದಿದ್ದು, ಏರ್‌ಪೋರ್ಟ್ ಫ್ಲೈಓವರ್ ಮೇಲೆ ಬೈಕ್‍ನಲ್ಲಿ 45 ವರ್ಷದ ಸವಾರ ಮತ್ತು ಹಿಂಬದಿಯಲ್ಲಿ 12 ವರ್ಷದ ಬಾಲಕ ಕುಳಿತುಕೊಂಡಿದ್ದ. ಬೈಕ್ ಎಡಬದಿಯಲ್ಲಿ ಹೋಗುತ್ತಿದ್ದರೂ ಕಾರೊಂದು ರಭಸವಾಗಿ ಬಂದು ಗುದ್ದಿದೆ. ಪರಿಣಾಮ ವಾಹನ ಸವಾರ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು ಕೊನೆಯುಸಿರೆಳೆದಿದ್ದಾನೆ. ಬಾಲಕನಿಗೆ ಗಂಭೀರ ಗಾಯವಾಗಿದೆ.
ಆಕ್ಸಿಡೆಂಟ್ ಆದ ಸ್ಥಳದಿಂದ 200 ಮೀಟರ್ ದೂರದಲ್ಲಿ ಬೈಕ್ ಬಿದ್ದಿದೆ. ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಅಪಘಾತಕ್ಕೆ ಒಳಗಾದವರ ಗುರುತು ಪತ್ತೆ ಮಾಡುತ್ತಿದ್ದಾರೆ. ಕೆ.ಆರ್.ಪುರಂ ಬಳಿ ಕಾರು ಚಾಲಕನನ್ನ ಪೊಲೀಸರು ಬಂಧಿಸಿದ್ದಾರೆ.
ನಡೆದಿದ್ದೇನು?
ಮೃತ ವ್ಯಕ್ತಿ ಗೋವಿಂದಪ್ಪ(44) ಎಂದು ಗುರುತಿಸಲಾಗಿದ್ದು, ಅವರು ಜಕ್ಕೂರು ಲೇಔಟ್ ನಿವಾಸಿಯಾಗಿದ್ದರು. ಗೋವಿಂದಪ್ಪ ಅವರು ಸಂಬಂಧಿಕರ ಮಗ ಸಂಜಯ್ ಜಕ್ಕೂರು ಏರೋಡ್ರಮ್ ತೋರಿಸಲು ಏರ್‌ಪೋರ್ಟ್ ಫ್ಲೈಓವರ್ ಬಳಿ ಬಂದಿದ್ದರು. ಈ ವೇಳೆ ಗೋವಿಂದಪ್ಪ ಫ್ಲೈಓವರ್ ಮೇಲೆ ಮೊಪೆಡ್ ಬೈಕ್ ನಿಲ್ಲಿಸಿ ಸಂಜಯ್‍ಗೆ ಏರೋಡ್ರಮ್ ತೋರಿಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಮೊಪೆಡ್‍ಗೆ ಡಿಕ್ಕಿ ಹೊಡೆದಿದೆ.
Laxmi News 24×7