Breaking News

ಗೋವಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿಯ ಮೂವರು ಯುವಕರು ಸಾವಿಗೀಡಾಗಿದ್ದಾರೆ.

Spread the love

ಬೆಳಗಾವಿ: ಗೋವಾದ ಮಾಪ್ಸಾ ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿಯ ಮೂವರು ಯುವಕರು ದುರ್ಮರಣ ಹೊಂದಿದ್ದಾರೆ.

ನಾಯರ್ ಅನಗೋಲ್ಕರ್ (28), ರೋಹನ್ ಗದಗ (26) ಹಾಗೂ ಸನ್ನಿ ಅವನೇಕರ್ (31) ಮೃತಪಟ್ಟಿರುವ ಯುವಕರೆಂದು ಗುರುತಿಸಲಾಗಿದೆ.

ಮಾಪ್ಸಾ ಜಿಲ್ಲೆಯ ಕುಛೇಲಿ ಬಳಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಕಾರು ಅಪಘಾತ ಸಂಭವಿಸಿತು. ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿಸಿದ ಪರಿಣಾಮ ದುರ್ಘಟನೆ ನಡೆದಿದೆ. ಈ ವೇಳೆ ಮೂವರು ಯುವಕರು ಸ್ಥಳದಲ್ಲೇ ಅಸುನೀಗಿದ್ದಾರೆ.

ಗೋವಾದಲ್ಲಿ ಭೀಕರ ಕಾರು ಅಪಘಾತಘಟನೆಯಲ್ಲಿ ಮತ್ತೋರ್ವ ಪ್ರಯಾಣಿಕ ವಿಶಾಲ್ ಕರಜೇಕರ್‌ಗೆ ಗಂಭೀರ ಗಾಯವಾಗಿದೆ. ಗಾಯಾಳುವನ್ನು ಗೋವಾದ ಜೆಎಂಸಿಗೆ ರವಾನಿಸಲಾಗಿದೆ‌ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.


Spread the love

About Laxminews 24x7

Check Also

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Spread the loveನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ