Breaking News

ಅಜಾನ್ ವಿರುದ್ಧ ಜೂನ್ 1ರಿಂದ ಮತ್ತೆ ಹೋರಾಟ: ಮುತಾಲಿಕ್

Spread the love

ಹಾಸನ, ಮೇ 22: “ಅಜಾನ್ ವಿಷಯದಲ್ಲಿ ಸರ್ಕಾರ ದೃಢ ನಿಲುವಿನೊಂದಿಗೆ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಜೂನ್ 1ರಿಂದ ಎರಡನೇ ಸುತ್ತಿನ ಹೋರಾಟವನ್ನು ಶ್ರೀರಾಮಸೇನೆ ವತಿಯಿಂದ ಹಮ್ಮಿಕೊಳ್ಳಲಾಗುವುದು” ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಸಿದರು.

 

ಹಾಸನದಲ್ಲಿ ಮಾತನಾಡಿದ ಅವರು, “ಸುಪ್ರೀಂಕೋರ್ಟ್ ನಿರ್ದೇಶನದಂತೆ ಮಸೀದಿಗಳಲ್ಲಿ ಅಜಾನ್ ನಿಲ್ಲಿಸಬೇಕಾಗಿದೆ ಹಾಗೂ ನಿರ್ದಿಷ್ಟ ಪ್ರಮಾಣದ ಧ್ವನಿಯೊಂದಿಗೆ ಅಜಾನ್ ಪ್ರಸಾರ ಮಾಡುವುದಕ್ಕೆ ಸೂಚನೆ ನೀಡಲಾಗಿದ್ದರೂ ಸಹ ಬಹುತೇಕ ಮಸೀದಿಗಳಲ್ಲಿ ಇದು ಪಾಲನೆ ಆಗುತ್ತಿಲ್ಲ” ಎಂದು ದೂರಿದರು.

“ಮುಖ್ಯಮಂತ್ರಿ ಹಾಗೂ ಗೃಹಮಂತ್ರಿ ಸಹ ಈ ಬಗ್ಗೆ ದೃಢ ನಿಲುವನ್ನು ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಮುಂದಿನ ದಿನಗಳಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಂಡು ಅಜಾನ್ ನಿಲ್ಲಿಸದಿದ್ದರೆ ಜೂನ್ 1ರಿಂದ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಹೇಳಿದರು.


Spread the love

About Laxminews 24x7

Check Also

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ

Spread the loveಹಾಸನ (ಮಾ.19): ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡರ ಕುಟುಂಬದಲ್ಲಿ ದುಃಖದ ಛಾಯೆ ಆವರಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ