Breaking News

2023ರ ಚುನಾವಣೆಯ ನಂತರ ಕಾಂಗ್ರೆಸ್ ಖಾಲಿ ಖಾಲಿ!: ಬಿಜೆಪಿ ವ್ಯಂಗ್ಯ

Spread the love

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್‌ ಖಾಲಿ ಖಾಲಿಯಾಗಲಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. #SidduVsDKS ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

 

‘ಒಡೆದ ಮನೆ ಕಾಂಗ್ರೆಸ್ ಪಕ್ಷದಲ್ಲಿ ಮೊದಲೆಲ್ಲಾ ಕೆಪಿಸಿಸಿ ಅಧ್ಯಕ್ಷಡಿ.ಕೆ.ಶಿವಕುಮಾರ್ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ಮನಸ್ತಾಪದ ಪಿಸುಮಾತು ರಾಜ್ಯಕ್ಕೆ ಕೇಳಿಸುತ್ತಿತ್ತು. ಈಗ ಅದರ ಸದ್ದು, ದೆಹಲಿವರೆಗೂ ಕೇಳಿಸುತ್ತಿದೆ. ಕೈ ಕಮಾಂಡ್ ತೇಪೆ ಹಚ್ಚುವ ವ್ಯರ್ಥ ಪ್ರಯತ್ನ ಮಾಡುತ್ತಿದೆ. ಇವರ ಒಳಜಗಳದಿಂದಲೇ ರಾಜ್ಯ ಕಾಂಗ್ರೆಸ್‌ ಮುಕ್ತವಾಗಲಿದೆ’ ಎಂದು ಕುಟುಕಿದೆ.

 

‘ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವಿನ ಮನಸ್ತಾಪಕ್ಕೆ ಎಷ್ಟೊಂದು ಕಾರಣಗಳಿವೆ. ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿ, ವಿಧಾನಸಭೆಯ ವಿಪಕ್ಷ ಉಪ ನಾಯಕರ ಸ್ಥಾನ, ಸಿಎಂ ಅಭ್ಯರ್ಥಿ ಘೋಷಣೆ ಮತ್ತು ಎಂಎಲ್‌ಸಿ ಅಭ್ಯರ್ಥಿ ಹೀಗೆ ಎಲ್ಲದರಲ್ಲೂ ಮುಸುಕಿನ ಗುದ್ದಾಟ ನಡೆಯುತ್ತಿದೆ’ ಎಂದು ಬಿಜೆಪಿ ಟೀಕಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ