Breaking News

ಮಾಜಿ ಸಚಿವರ ಒಡೆತನದ ಬಸ್‌ ಅಪಘಾತ: 9 ಜನರು ದಾರುಣ ಸಾವು

Spread the love

ಹುಬ್ಬಳ್ಳಿ: ಕರ್ನಾಟಕದ ಮಾಜಿ ಸಚಿವರೊಬ್ಬರಿಗೆ ಸೇರಿದೆ ಎನ್ನಲಾದ ರಾಷ್ಟ್ರೀಯ ಸಾರಿಗೆ ಬಸ್‌ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮ ಒಂಬತ್ತು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಈ ದುರಂತ ತಾರಿಹಾಳ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

 

ಇದನ್ನು ಓದಿ: ಈಗ ನಿಮ್ಮೊಂದಿಗೆ RC-DL ಒಯ್ಯುವ ಅಗತ್ಯವಿಲ್ಲ- ಎಲ್ಲವನ್ನು ವಾಟ್ಸಾಪ್‌ನಲ್ಲೇ ಡೌನ್‌ಲೋಡ್ ಮಾಡಿ

ಧಾರವಾಡ ರಸ್ತೆ ಅಪಘಾತ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಅವಘಡದಲ್ಲಿ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಉಳಿದವರು ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅನೇಕ ಮಂದಿಗೆ ಗಾಯಗಳಾಗಿದ್ದು ಅವರನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಟ್ರ್ಯಾಕ್ಟರ್ ಓವರ್ ಟೇಕ್ ಮಾಡಲು ಹೋದ ಬಸ್‌ ಚಾಲಕ, ರಸ್ತೆಯ ಬಲಭಾಗಕ್ಕೆ ಸರಿಯಾದ ದಿಕ್ಕಿನಲ್ಲಿ ಬರ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಈ ದುರಂತ ಸಂಭವಿಸಿದೆ. ಇನ್ನು ಅವಘಡಕ್ಕೆ ಬಸ್ ಚಾಲಕನ ನಿರ್ಲಕ್ಷವೇ ಕಾರಣ ಎಂದು ಹೇಳಲಾಗುತ್ತಿದೆ. ಅಪಘಾತದಲ್ಲಿ ಮೃತಪಟ್ಟ ಅನೇಕರು ಮಹಾರಾಷ್ಟ್ರದ ಸಾಂಗ್ಲಿ, ಕೊಲ್ಹಾಪುರ ಮತ್ತು ಪುಣೆ ಮೂಲದವರು ಎಂದು ತಿಳಿದುಬಂದಿದೆ.

 

 


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ