Breaking News

ಪರಿಷತ್‌ ಚುನಾವಣೆ: ಟಿ.ಎ.ಶರವಣ ಜೆಡಿಎಸ್ ಅಭ್ಯರ್ಥಿ

Spread the love

ಬೆಂಗಳೂರು: ಕರ್ನಾಟಕದ ವಿಧಾನ ಸಭೆಯಿಂದ ವಿಧಾನ ಪರಿಷತ್‌ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ.ಶರವಣ ಆಯ್ಕೆಯಾಗಿದ್ದಾರೆ.

 

ಅಭ್ಯರ್ಥಿಯಾಗಿ ಟಿ.ಎ.ಶರವಣ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಮಂಗಳವಾರ ಘೋಷಣೆ ಮಾಡಿದ್ದಾರೆ.

ಇದರೊಂದಿಗೆ, ಶರವಣ ಅವರು ಎರಡನೇ ಬಾರಿಗೆ ಪರಿಷತ್ ಪ್ರವೇಶಿಸಲಿದ್ದಾರೆ.

ವಿಧಾನ ಪರಿಷತ್‌ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಶರವಣ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಸಿ.ಎಂ.ಇಬ್ರಾಹಿಂ ಇದ್ದರು.

ಬಿಜೆಪಿ ಹಾಗೂ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿವೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ