Breaking News

ಇಂಡೊ-ಅಮೆರಿಕನ್ ಪ್ರೆಸ್ ಕ್ಲಬ್‍ನಿಂದ ಕೆಎಲ್‍ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಅವರಿಗೆ ‘ಜೀವಮಾನ ಸಾಧನೆ’ ಪ್ರಶಸ್ತಿ ನೀಡಿ ಗೌರವಿ

Spread the love

ಬೆಳಗಾವಿ: ನ್ಯೂಯಾರ್ಕ್‍ನ ಭಾರತೀಯ ರಾಯಭಾರಿ ಕಚೇರಿಯಲ್ಲಿ ಮೇ 21ರಂದು ನಡೆದ ಸಮಾರಂಭದಲ್ಲಿ ಅಮೆರಿಕದ ಇಂಡೊ-ಅಮೆರಿಕನ್ ಪ್ರೆಸ್ ಕ್ಲಬ್‍ನಿಂದ ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರಿಗೆ ‘ಜೀವಮಾನ ಸಾಧನೆ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 

ಉತ್ತರ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಗ್ರಾಮೀಣ ಜನರಿಗೆ ಗುಣಮಟ್ಟದ ಶಿಕ್ಷಣ, ಆರೋಗ್ಯ ಸೇವೆ ಒದಗಿಸುತ್ತಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಭಾರತೀಯ ರಾಯಭಾರಿ ಕಚೇರಿಯ ಕನ್ಸೂಲ್ ಜನರಲ್‍ ರಣಧೀರ ಜೈಸ್ವಾಲ್ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಭಾರತೀಯ ಉದ್ಯಮಿ ಪ್ಯಾಮ್ ಕ್ವಾತ್ರಾ, ಬಿಲ್ ಡೆ ಬ್ಲಾಸಿಯೊ, ಝೇವಿಯರ್ ವಿಶ್ವವಿದ್ಯಾಲಯದ ಅಧ್ಯಕ್ಷ ರವಿಶಂಕರ ಭೂಪ್ಲಾಪುರ, ಡಾ.ದತ್ತಾತ್ರೇಯುಡು ನೋರಿ, ಇಂಡೊ-ಅಮೆರಿಕನ್ ಪ್ರೆಸ್ ಕ್ಲಬ್‍ ಕಾರ್ಯಾಧ್ಯಕ್ಷ ಕಮಲೇಶ್ ಮೆಹ್ತಾ ಹಾಜರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ