Breaking News

ಬೆಳಗಾವಿಯ ಮಿಡಕನಟ್ಟಿಯಲ್ಲಿ 2.58 ಲಕ್ಷ ಮೌಲ್ಯದ ಗಾಂಜಾ ಬೆಳೆ ವಶಕ್ಕೆ

Spread the love

ಬೆಳಗಾವಿ: ಜಿಲ್ಲೆಯ ಮಿಡಕನಟ್ಟಿಯಲ್ಲಿ 2.58 ಲಕ್ಷ ಮೌಲ್ಯದ ಗಾಂಜಾ ಬೆಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಮಿಡಕನಟ್ಟಿ ಗ್ರಾಮದ ಗದ್ದೆಯಲ್ಲಿ ಗಾಂಜಾ ಬೆಳೆಯಲಾಗಿತ್ತು. ಈ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿ ಬೆಳೆಯನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಗಾಂಜಾ ಬೆಳೆದಿದ್ದ ಪರಪ್ಪ ಸವಸುದ್ದಿಯನ್ನು ಬಂಧಿಸಿದ್ದಾರೆ.

ಬೆಳಗಾವಿ ಡಿಸಿಆರ್‍ಬಿ, ಸಿಇಎನ್ ಹಾಗೂ ಗೋಕಾಕ್ ಗ್ರಾಮೀಣ ಠಾಣೆಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಇದೇ ವೇಳೆ 2 ಲಕ್ಷ 58 ಸಾವಿರ ಮೌಲ್ಯದ 25 ಕೆ.ಜಿ 800 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಬಂಧ ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕಲಾ ಪ್ರತಿಭೋತ್ಸವಕ್ಕೆ ಚಾಲನೆ

Spread the love ಕಲಾ ಪ್ರತಿಭೋತ್ಸವಕ್ಕೆ ಚಾಲನೆ ಬೆಳಗಾವಿ. ಜಿಲ್ಲೆಯ ಬಾಲ ಪ್ರತಿಭೆ ಹಾಗೂ ಯುವ ಪ್ರತಿಭೆಗಳಿಗೆ ಜಾನಪದ ಗೀತೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ