ಸಮಾಜ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿಗೆ 5 ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಖಾಸಗಿ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಗಳಿಂದ ಅರ್ಜಿ ಪಡೆದು, ಮೇ 31 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಡಯಟ್ ಮೂಲಕ ಪ್ರವೇಶ ಪರೀಕ್ಷೆ ಜೂ.5 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ದೂ.08392-267932 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
Laxmi News 24×7