Breaking News

ಕಾಂಗ್ರೆಸ್ ಮುಖಂಡರು ಕೊರೊನಾ ಸಂದಿಗ್ಧ ಪರಿಸ್ಥಿತಿಯನ್ನು ರಾಜಕೀಯ ಲಾಭ ಪಡೆಯುತ್ತಿದ್ದಾರೆ: ಮಹೇಶ ಕುಮಟಳ್ಳಿ

Spread the love

ಅಥಣಿ: ಕಾಂಗ್ರೆಸ್ ಮುಖಂಡರು ಕೊರೊನಾ ಸಂದಿಗ್ಧ ಪರಿಸ್ಥಿತಿಯನ್ನು ರಾಜಕೀಯ ಲಾಭ ಪಡೆಯುತ್ತಿದ್ದಾರೆ ಎಂದು ಶಾಸಕ‌ ಮಹೇಶ ಕುಮಟಳ್ಳಿ ಕಿಡಿಕಾರಿದ್ದಾರೆ.

ಶಾಸಕ‌ ಮಹೇಶ ಕುಮಟಳ್ಳಿ ಕಾಣೆಯಾಗಿದ್ದಾರೆ ಎಂಬ ಕಾಂಗ್ರೆಸ್ ಮುಖಂಡರ‌ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮುಖಂಡರನಷ್ಟು ಕೀಳು ರಾಜಕೀಯಕ್ಕೆ ನಾನು ಇಳಿಯಲ್ಲ.
ಅಧಿಕಾರಿಗಳು ಹಾಗೂ ಜನರ ಮಧ್ಯೆ ಇದ್ದು, ಕೊರೊನಾ ಸೋಂಕು ಹರಡದಂತೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದೇನೆ ಎಂದರು.‌

ಪ್ರತಿನಿತ್ಯ ಅವರ ಮನೆಗೆ ಹೋಗಿ ಭೇಟಿ ಕೊಟ್ಟು ಬರುವುದು ನನಗೆ ಆಗಲ್ಲ, ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಹೇಗೆ ಇದ್ದಾರೆ ಎಂದು ನನಗೆ ಮೊದಲಿನಿಂದಲೂ ಗೊತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಥಣಿ ಜಮಖಂಡಿ ಹಾಗೂ ಅಥಣಿ ತಾಲೂಕಿನ ಜನರಿಗಾಗಿ ರಾಜಾಪುರ ಬ್ಯಾರೇಜ್ ನಿಂದ ಕೃಷ್ಣಾನದಿ ಹಿಪ್ಪರಗಿ ಬ್ಯಾರೇಜ್ ಗೆ ನೀರು ಹರಿಸಲಾಗುತ್ತಿದೆ ಎಂದು ಶಾಸಕ ಮಹೇಶ ಕುಮಟಳ್ಳಿ ಹೇಳಿದ್ರು.

ಹಿಪ್ಪರಗಿ ಬ್ಯಾರೇಜ್ ಕೆಳಭಾಗದ ನಲವತ್ತಕ್ಕೂ ಹೆಚ್ಚು ಹಳ್ಳಿಗಳಿಗೆ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗುವುದರಿಂದ ಮುಂಜಾಗೃತವಾಗಿ ರಾಜಾಪುರ ಬ್ಯಾರೇಜ್ ನಿಂದ ಹಿಪ್ಪರಿಗೆ ಬ್ಯಾರೇಜ್ ಗೆ ನೀರು ಹರಿಸಲಾಗುತ್ತಿದೆ‌. ,
ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.‌


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ