ಬೆಂಗಳೂರು: ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕನ್ನಡಿಗರನ್ನು ಕೆಣಕಿದರೆ ರಾಜ್ಯ ಸರ್ಕಾರ ಸಹಿಸಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಿನ್ನೆ ಬೆಳಗಾವಿಯಲ್ಲಿ ನಡೆದ ಎಂಇಎಸ್ ಪುಂಡಾಟವನ್ನು ತೀವ್ರವಾಗಿ ಖಂಡಿಸುತ್ತೇವೆ. ಕನ್ನಡ ಹಾಡು ಹಾಕಿದ್ದಾರೆ ಎಂಬ ಕಾರಣಕ್ಕೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಕಾನೂನು ಕೈಗೆ ತೆಗೆದುಕೊಂಡರೆ ಸಹಿಸಲು ಸಾಧ್ಯವಿಲ್ಲ ಎಂದರು.
ಇದೇ ವೇಳೆ ಆರ್ ಎಸ್ ಎಸ್ ನ ಮೂಲ ಭಾರತವಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಮೊದಲು ಸಿದ್ದರಾಮಯ್ಯ ದ್ರಾವಿಡರೋ ಅಥವಾ ಯಾರು ಎಂದು ಸ್ಪಷ್ಟಪಡಿಸಲಿ ಎಂದು ಹೇಳಿದರು.
Laxmi News 24×7