Breaking News

ಯುವಕನಿಂದ ಅತ್ಯಾಚಾರಕ್ಕೆ ಒಳಗಾಗಿದ್ದ 65ರ ವೃದ್ಧೆ ಸಾವು: ನರ್ಸ್​ ಮುಂದೆ ಬಿಚ್ಚಿಟ್ಟ ಸತ್ಯದಿಂದ ಆರೋಪಿ ಬಂಧನ!

Spread the love

ಪತ್ತನಂತಿಟ್ಟ: ಯುವಕನಿಂದ ಅತ್ಯಾಚಾರಕ್ಕೆ ಒಳಗಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 65 ವರ್ಷದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಅಸುನೀಗಿದ್ದಾಳೆ.

ಕೇರಳದ ಅಂಬಾಲಪುಳದಲ್ಲಿ ಈ ಘಟನೆ ನಡೆದಿದೆ.

ಥೋಪುಂಪಡಿ ನಿವಾಸಿ ಸುನೀಶ್​ ಅಲಿಯಾಸ್​ ಅಪ್ಪು (22) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೇ 25ರ ರಾತ್ರಿ 10 ಗಂಟೆ ಸುಮಾರಿಗೆ ಆರೋಪಿ ಅತ್ಯಾಚಾರ ಎಸಗಿದ್ದಾನೆ. ಕಾಂಪೌಂಡ್​ ಗೋಡೆಯನ್ನು ಹತ್ತಿ ಮನೆಯ ಆವರಣಕ್ಕೆ ನುಗ್ಗಿದ ಆರೋಪಿ ಬಾಗಿಲು ಬಡಿದಿದ್ದಾನೆ. ಬಾಗಿಲು ತೆರೆಯುತ್ತಿದ್ದಂತೆ ವೃದ್ಧೆಯ ಮೇಲೆರಗಿ ಅತ್ಯಾಚಾರ ಎಸಗಿದ್ದಾನೆ. ಮನೆಯಲ್ಲಿ ವೃದ್ಧೆ ಒಬ್ಬಳೇ ಇರುವುದನ್ನು ಗಮನಿಸಿ ಆರೋಪಿ ಸಂಚು ಹಾಕಿ ಕೃತ್ಯ ಎಸಗಿದ್ದಾನೆಂದು ಹೇಳಲಾಗಿದೆ.

ಅತ್ಯಾಚಾರಕ್ಕೆ ಒಳಗಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧೆಯನ್ನು ಸಂಬಂಧಿಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ನರ್ಸ್​ ಬಳಿ ನಡೆದ ಎಲ್ಲ ಘಟನೆಯನ್ನು ವೃದ್ಧೆ ವಿವರಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗೆಂದು ಪೆರುಮಾಳದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ, ಚಿಕಿತ್ಸೆ ಫಲಕಾರಿಯಾಗದೇ ಘಟನೆ ನಡೆದ ಮೂರು ದಿನಗಳ ನಂತರ ವೃದ್ಧೆ ಕೊನೆಯುಸಿರೆಳೆದಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ