ಬೆಳಗಾವಿ: ಸಿಯಾಚಿನ್ ಗ್ಲೇಷಿಯರ್‌ನಲ್ಲಿ ನಡೆಯುತ್ತಿದ್ದ ಆಪರೇಷನ್ ಮೇಘದೂತ ಕಾರ್ಯಾಚರಣೆ ಸಂದರ್ಭದಲ್ಲಿ ಹುತಾತ್ಮರಾದ ಮರಾಠ ಲಘು ಪದಾತಿದಳದ ಯೋಧ ಕೊಲ್ಲಾಪುರ ಜಿಲ್ಲೆಯ ಜಾಧವ ಪ್ರಶಾಂತ ಶಿವಾಜಿ ಅವರ ಪಾರ್ಥಿವ ಶರೀರಕ್ಕೆ ಅನೇಕ ಗಣ್ಯರು ಅಂತಿಮ ನಮನ ಸಲ್ಲಿಸಿದರು.
ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ ಆಗಮಿಸಿದ ಪಾರ್ಥಿವ ಶರೀರವನ್ನು ಬರಮಾಡಿಕೊಂಡು ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು. ಅಂತಿಮ ನಮನ ಸಲ್ಲಿಸಿದ ಬಳಿಕ ಯೋಧನ ಪಾರ್ಥಿವ ಶರೀರವನ್ನು ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ಜಿಲ್ಲೆ ಗಡಹಿಂಗ್ಲಜ್ ತಾಲೂಕಿನ ಬಸರಗಿ ಬಿ.ಕೆ. ಗ್ರಾಮಕ್ಕೆ ರಸ್ತೆ ಮೂಲಕ ಕಳಿಸಿಕೊಡಲಾಯಿತು
 Laxmi News 24×7
Laxmi News 24×7
				 
		 
						
					 
						
					