Breaking News

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೆಸರು ಘೋಷಣೆ ಇನ್ನಷ್ಟು ವಿಳಂಬ

Spread the love

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೆಸರು ಘೋಷಣೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದೆ. ಕಾರ್ಯಾಧ್ಯಕ್ಷ ಸ್ಥಾನಗಳ ಬಗ್ಗೆ ಹೈಕಮಾಂಡ್ ಇಂದು ಅಂತಿಮ ನಿರ್ಧಾರ ಕೈಗೊಳುವ ಸಾಧ್ಯತೆಯಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆಯೂ ವಿಳಂಬವಾಗಲಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹೆಸರನ್ನು ಹೈಕಮಾಂಡ್ ಫೈನಲ್ ಮಾಡಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಆದರೆ ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ಭಾನುವಾರ ಅಥವಾ ಸೋಮವಾರ ಘೋಷಣೆ ಮಾಡಲಿದೆ.

ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರ ನೇಮಕದ ಬಗ್ಗೆ ಈಗಾಗಲೇ ಡಿ.ಕೆ ಶಿವಕುಮಾರ್ ಕೂಡ ವಿರೋಧ ವ್ಯಕ್ತಪಡಿಸಿದ್ದು, ಈಗಿರುವ ಓರ್ವ ಕಾರ್ಯಾಧ್ಯಕ್ಷರೇ ಮುಂದುವರೆಯಲಿ ಎಂದು ಹೈಕಮಾಂಡ್ ಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
Advertisement


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ