Breaking News

ಆರ್‍ಎಸ್‍ಎಸ್ ದೃಷ್ಟಿಯಲ್ಲಿ ಹಿಂದೂ ಆಗಲೂ 40 ಪರ್ಸೆಂಟ್ ಕಮಿಷನ್, ಬ್ಲೂ ಫಿಲ್ಮ್, ನೋಡಬೇಕಾ..? ಗಣಿ ಲೂಟಿ ಮಾಡಬೇಕಾ..? ಚೆಕ್‍ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ..?

Spread the love

ಆರ್‍ಎಸ್‍ಎಸ್ ದೃಷ್ಟಿಯಲ್ಲಿ ಹಿಂದೂ ಆಗಲೂ 40 ಪರ್ಸೆಂಟ್ ಕಮಿಷನ್ ಹೊಡೆಯಬೇಕಾ..? ಬ್ಲೂ ಫಿಲ್ಮ್ ನೋಡಬೇಕಾ..? ಗಣಿ ಲೂಟಿ ಮಾಡಬೇಕಾ..? ಚೆಕ್‍ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ..? ಏನು ಮಾಡಬೇಕು..? ಹೇಳಿಬಿಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸರಣಿ ಟ್ವೀಟ್ ಮೂಲಕ ಆರ್‍ಆರ್‍ಎಸ್ ವಿರುದ್ಧ ಹರಿಹಾಯ್ದಿರುವ ಮಾಜಿ ಸಿಎಂ ಸಿದ್ದರಾಮಯ್ಯ ನಾನು ಪ್ರಶ್ನೆ ಮಾಡಿದ್ದು ಆರ್‍ಎಸ್‍ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು ರಾಜ್ಯ ಬಿಜೆಪಿ ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ..? ಆರ್‍ಎಸ್‍ಎಸ್ ನಾಯಕರು ಓದು-ಬರಹ ಗೊತ್ತಿಲ್ಲದವರೇ..? ಅವರೇ ಉತ್ತರಿಸಲಿ ಎಂದು ಆಗ್ರಹಿಸಿದ್ದಾರೆ.

ಹಿಂದೂ ಧರ್ಮದ ರಕ್ಷಣೆಗಾಗಿಯೇ ಅವತಾರ ಎತ್ತಿ ಬಂದಂತೆ ಮಾತನಾಡುತ್ತಿರುವ ಆರ್‍ಎಸ್‍ಎಸ್ ನಾಯಕರು ಬೆಂಬಲಿಸುತ್ತಿರುವುದು ಮಾತ್ರ ಬಿಜೆಪಿ ಎಂಬ ರಾಜಕೀಯ ಪಕ್ಷವನ್ನು. ಯಾಕೆ ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ..? ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೆಂದು ಯಾವ ಆಧಾರದಲ್ಲಿ ಆರ್‍ಎಸ್‍ಎಸ್ ತೀರ್ಮಾನಿಸಿದೆ..? ಆರ್‍ಎಸ್‍ಎಸ್ ದೃಷ್ಟಿಯಲ್ಲಿ ಹಿಂದೂ ಆಗಲು ಹೊಂದಿರಬೇಕಾದ ಅರ್ಹತೆಗಳೇನು ಎಂದು ಪ್ರಶ್ನಿಸಿದರು.

ಆರ್‍ಎಸ್‍ಎಸ್ ಪ್ರತಿಪಾದಿಸುವ ಹಿಂದೂ ಧರ್ಮದಲ್ಲಿ ದಲಿತರು, ಹಿಂದುಳಿದ ಜಾತಿಗಳ ಸ್ಥಾನಮಾನ ಏನು..? ಆರ್‍ಎಸ್‍ಎಸ್ ಯಾಕೆ ಮೀಸಲಾತಿ, ಭೂಸುಧಾರಣೆಯನ್ನು ವಿರೋಧಿಸುತ್ತಾ ಬಂದಿದೆ..? ಇದರ ಫಲಾನುಭವಿಗಳು ಹಿಂದುಗಳಲ್ಲವೇ..? ಹಸಿದ ಹೊಟ್ಟೆಗೆ ಅನ್ನ, ಎಳೆಯ ಮಕ್ಕಳಿಗೆ ಹಾಲು, ರೈತರ ಬೆಳೆಗೆ ನ್ಯಾಯದ ಬೆಲೆ, ಯುವಜನರಿಗೆ ಉದ್ಯೋಗ, ಅವಕಾಶ ವಂಚಿತರಿಗೆ ಸಮಾನ ಅವಕಾಶ, ಜಾತಿ ತಾರತಮ್ಯದಿಂದ ಅನ್ಯಾಯಕ್ಕೀಡಾದವರಿಗೆ ಸಾಮಾಜಿಕ ನ್ಯಾಯ, ಹಿಂದೂ ಆಗಲು ಇಷ್ಟು ಅರ್ಹತೆ ಸಾಲದೇ ಎಂದು ಪ್ರಶ್ನಿಸಿದರು.

 

ಹಿಂದೂ ಧರ್ಮದೊಳಗಿನ ಅನಿಷ್ಠಗಳನ್ನು ಪ್ರಶ್ನಿಸಿದ ಮಾತ್ರಕ್ಕೆ ನನ್ನಂತಹವರು ಹಿಂದೂ ವಿರೋಧಿ ಆಗುವುದಾದರೆ..? ಇದೇ ಕೆಲಸ ಮಾಡಿರುವ ಸ್ವಾಮಿ ವಿವೇಕಾನಂದ, ಕನಕದಾಸ, ನಾರಾಯಣ ಗುರುಗಳನ್ನು ಏನೆಂದು ಕರೆಯುತ್ತೀರಿ..?
ಆರ್‌ಎಸ್‌ಎಸ್ ನಾಯಕರೇ ನಿಮ್ಮ ಆತ್ಮವನ್ನು ಸಾಕ್ಷಿಯಾಗಿಟ್ಟುಕೊಂಡು ಹೇಳಿಬಿಡಿ. ನಿಮ್ಮ ನಿಷ್ಠೆ ರಾಷ್ಟçಧ್ವಜಕ್ಕೋ..? ಭಗವಾ ಧ್ವಜಕ್ಕೋ..? ನಿಮ್ಮ ನಿಷ್ಠೆ ಸಂವಿಧಾನಕ್ಕೋ..? ಮನುಸ್ಮೃತಿಗೋ..? ನಿಮ್ಮ ನಿಷ್ಠೆ ಗಾಂಧೀಜಿಗೋ..? ಗೋಡ್ಸೆಗೋ..? ಆರ್‌ಎಸ್‌ಎಸ್ ನಾಯಕರೇ, ಈ ರಿಮೋಟ್ ಕಂಟ್ರೋಲ್ ರಾಜಕೀಯ ಬಿಟ್ಟು ಬಿಡಿ. ನಿಮ್ಮ ತತ್ವ-ಸಿದ್ದಾಂತದ ಬಗ್ಗೆ ಅಷ್ಟೊಂದು ವಿಶ್ವಾಸ ನಿಮಗಿದ್ದರೆ ಈ ಹಿಂಬಾಗಿಲ ರಾಜಕೀಯ ಮಾಡದೆ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಡಿ, ಗೆಲುವು ಕೋಮುವಾದದ್ದೋ..? ಜಾತ್ಯತೀತತೆಯದ್ದೋ..? ನೋಡಿಯೇ ಬಿಡೋಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ