ಶಿವಮೊಗ್ಗ : ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ( Kodihalli Chandrashekhar ) ಅವರನ್ನು ವಜಾಗೊಳಿಸಲಾಗಿದೆ. ಅಲ್ಲದೇ ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಹೆಚ್.ಆರ್. ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಇಂದು ಈ ಸಂಬಂಧ ರಾಜ್ಯ ರೈತ ಸಂಘದಿಂದ ಶಿವಮೊಗ್ಗದಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು. ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ಇಂದು 18 ಜಿಲ್ಲೆಗಳ ರೈತ ಸಂಘದ ಪದಾಧಿಕಾರಿಗಳು, ರಾಜ್ಯ ಸಮಿತಿ ಪದಾಧಿಕಾರಿಗಳು ಸಭೆ ಸೇರಿ ಸಮಾಲೋಚನೆ ನಡೆಸಿದರು. ಈ ಸಭೆಯಲ್ಲಿ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸುವಂತ ತೀರ್ಮಾನ ಕೈಗೊಳ್ಳಲಾಗಿದೆ.
Laxmi News 24×7