Breaking News

ರೋಹಿತ್ ಚಕ್ರತೀರ್ಥ ವಜಾ? – ಸಚಿವರ ವರದಿ ಆಧರಿಸಿ ಕ್ರಮ ಕೈಗೊಳ್ತೇನೆಂದ ಸಿಎಂ

Spread the love

ಬೆಂಗಳೂರು: ಪಠ್ಯ ಪರಿಷ್ಕರಣೆ ವಿಚಾರವಾಗಿ ದಿನಕ್ಕೊಂದು ವಿವಾದ ಭುಗಿಲೇಳುತ್ತಿದ್ದು, ರಾಜ್ಯ ಸರ್ಕಾರ ತೀವ್ರ ಒತ್ತಡ ಎದುರಿಸುತ್ತಿರುವಂತೆ ಕಾಣುತ್ತಿದೆ. ಅದ್ರಲ್ಲೂ ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ತಲೆದಂಡಕ್ಕೆ ದಿನೇ ದಿನೇ ಆಗ್ರಹ ಹೆಚ್ಚುತ್ತಿದೆ.

ಬೆಂಗಳೂರು, ಚಾಮರಾಜನಗರ, ಬಾಗಲಕೋಟೆ ಸೇರಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಲೇ ಇವೆ. ರಾಷ್ಟ್ರಕವಿ ಕುವೆಂಪುರನ್ನು ಅಪಮಾನಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದ ಆದಿಚುಂಚನಗಿರಿ ಶ್ರೀಗಳ ಮನವೊಲಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಆದರೆ ಅದೂ ಫಲ ಕೊಟ್ಟಂತೆ ಕಾಣುತ್ತಿಲ್ಲ.

ನಿನ್ನೆ ಸಚಿವ ಬಿ.ಸಿ.ನಾಗೇಶ್ ಆದಿಚುಂಚನಗಿರಿ ಮಠಕ್ಕೆ ಭೇಟಿ ಕೊಟ್ಟಿದ್ರು. ಇಂದು ಪಠ್ಯಪುಸ್ತಕ ನಿರ್ದೇಶನಾಲಯದ ನಿರ್ದೇಶಕ ಮಾದೇಗೌಡ ನೇತೃತ್ವದ ತಂಡ ಶ್ರೀಗಳನ್ನು ಭೇಟಿ ಮಾಡಿ ಕುವೆಂಪು ಪಠ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ನಡುವೆ ಬಸವಣ್ಣಗೆ ಪಠ್ಯದಲ್ಲಿ ಅಪಮಾನ ಮಾಡಲಾಗಿದೆ. ಲಿಂಗಾಯತ ಧರ್ಮದ ಬಗ್ಗೆ ತಪ್ಪು ಕಲ್ಪನೆ ಬರುವಂತೆ ಪಠ್ಯ ಪರಿಷ್ಕರಣೆ ಮಾಡಲಾಗಿದೆ. ಕೂಡಲೇ ಇದನ್ನೆಲ್ಲಾ ಹಿಂಪಡೆದು, ಹಳೆಯ ಪಠ್ಯ ಮುಂದುವರೆಸಬೇಕು. ಇಲ್ಲ ಅಂದ್ರೆ ಹೋರಾಟ ಮಾಡಬೇಕಾಗುತ್ತದೆ ಎಂದು ಸಾಣೆಹಳ್ಳಿ ಶ್ರೀಗಳು ಪತ್ರ ಬರೆದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ