ಬೆಳಗಾವಿ: ಸುವರ್ಣಸೌಧದ ಮುಖ್ಯದ್ವಾರದ ಮೆಟ್ಟಿಲುಗಳ ಮೇಲೆ ‘ಶಾವಿಗೆ’ ಒಣಗಿಸಿದ್ದ ಪ್ರಕರಣದ ವಿಚಾರವಾಗಿ ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ ನೋಟಿಸ್ ನೀಡಲಾಗಿದೆ.
ಸುವರ್ಣಸೌಧದ ಸ್ವಚ್ಛತಾ ಕಾರ್ಯ ಗುತ್ತಿಗೆ ಪಡೆದ ಗುತ್ತಿಗೆದಾರನಿಗೆ ನೋಟಿಸ್ ನೀಡಲಾಗಿದೆ. ಗುತ್ತಿಗೆದಾರರು ಕೊಂಡಸಕೊಪ್ಪ ಗ್ರಾಮದ ಕಾರ್ಮಿಕ ಮಹಿಳೆಯನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಅಚಾತುರ್ಯದಿಂದ ಘಟನೆ ನಡೆದಿದೆ ಎಂದು ಸಮಜಾಯಿಷಿ, ಘಟನೆ ಮರುಕಳಿಸಿದಂತೆ ಎಲ್ಲಾ ಗುತ್ತಿಗೆದಾರರಿಗೆ ಲೋಕೋಪಯೋಗಿ ಇಲಾಖೆ ನೋಟಿಸ್ ನೀಡಿದೆ.
Laxmi News 24×7