Breaking News

‘ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವವರೆಗೂ ಹೋರಾಡುತ್ತೇವೆ.: ಎಂಇಎಸ್‌ ಆಗ್ರಹ

Spread the love

ಬೆಳಗಾವಿ: ‘ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವಂತೆ ಒತ್ತಾಯಿಸಿ ನೀವೂ ಹೋರಾಟ ಮುಂದುವರಿಸಿ. ನಾವೂ ನಿಮ್ಮ ಜೊತೆಗಿದ್ದೇವೆ’ ಎಂದು ಮಹಾರಾಷ್ಟ್ರದ ಶಿವಸೇನೆ ಮುಖಂಡ ಅರುಣ ದುಧವಾಡ್ಕರ್ ಮರಾಠಿಗರಿಗೆ ತಮ್ಮ ಬೆಂಬಲ ಸೂಚಿಸಿದರು.

1986ರಲ್ಲಿ ನಡೆದ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹೋರಾಟದಲ್ಲಿ ಹುತಾತ್ಮರಾದ 9 ಜನರಿಗೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಹಾಗೂ ಶಿವಸೇನೆ ಕಾರ್ಯಕರ್ತರು ತಾಲ್ಲೂಕಿನ ಹಿಂಡಲಗಾ ಗ್ರಾಮದಲ್ಲಿ ಬುಧವಾರ ಶ್ರದ್ಧಾಂಜಲಿ ಸಭೆ ಏರ್ಪಡಿಸಿದ್ದರು.

‘ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಬಗೆಹರಿಯುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎಂದು ಸಭೆಯ ಒಕ್ಕೊರಲಿನ ಬೇಡಿಕೆಯಾಗಿತ್ತು.

‘ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವವರೆಗೂ ಹೋರಾಡುತ್ತೇವೆ. ನೀವು ಮುಂಬೈನಲ್ಲಿ ಧರಣಿ ಹಮ್ಮಿಕೊಂಡರೆ, ಅಲ್ಲಿಗೂ ಬರುತ್ತೇವೆ. ಕೇಂದ್ರ ಸರ್ಕಾರದ ಮೇಲೆ ಒತ್ತಡ ತರೋಣ’ ಎಂದು ಎಂಇಎಸ್‌ ಅಧ್ಯಕ್ಷ ದೀಪಕ ದಳವಿ, ಮುಖಂಡ ಮನೋಹರ ಕಿಣೇಕರ್‌ ಕರೆ ನೀಡಿದರು.

ಶುಭಂ ಶೆಳಕೆ, ಪ್ರಕಾಶ ಮರಗಾಲೆ, ಮಾಳೋಜಿರಾವ್ ಅಷ್ಟೇಕರ್, ಪ್ರಕಾಶ ಮರಗಾಲೆ, ಶಿವಾಜಿ ಸುಂಠಕರ, ಸರಿತಾ ಪಾಟೀಲ, ರೇಣು ಕಿಲ್ಲೇಕರ, ಸುಧಾ ಭಾತಖಾಂಡೆ ಸೇರಿದಂತೆ ಹಲವರು ಪಾಲ್ಗೊಂಡರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ