2023 ರ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪಕ್ಷದ ಸಂಘಟನೆ ಹಾಗೂ ಕಾರ್ಯತಂತ್ರಗಳನ್ನು ರೂಪಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ನವಸಂಕಲ್ಪ ಶಿಬಿರದ ಮೊದಲನೇ ದಿನ ಕಾಂಗ್ರೆಸ್ ಮುಖಂಡರ ಜೊತೆ ಭಾಗಿಯಾದೆ.
ಈ ನವಸಂಕಲ್ಪ ಶಿಬಿರ ಪಕ್ಷಕ್ಕೆ ಮತ್ತಷ್ಟು ಶಕ್ತಿಯನ್ನು ತುಂಬಲಿದ್ದು, ಇದು ಬರುವ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ನಾಂದಿಯಾಗಲಿದೆ. ಬರುವ ಚುನಾವಣೆಯಯನ್ನು ನಾವೆಲ್ಲರೂ ಎಲ್ಲ ಭಿನ್ನಾಭಿಪ್ರಾಯಗಳನ್ನು ಮರೆತು ಕೂಡಿಕೊಂಡು ಕೆಲಸ ಮಾಡಬೇಕಿದೆ.
ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವದ ಅಭಿಯಾನದಲ್ಲಿ ನಮ್ಮ ಎಲ್ಲ ಕಾರ್ಯಕರ್ತರು ಶಕ್ತಿ ಮೀರಿ ತಮ್ಮ ಕೆಲಸಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಈ ಸದಸ್ಯತ್ವ ಅಭಿಯಾನದಲ್ಲಿ ನಮಗೆ ಅಭೂತಪೂರ್ವ ಯಶಸ್ಸು ಸಿಕ್ಕಿದ್ದು, ಇದು ಬರುವ ಚುನಾವಣೆಗೆ ದಿಕ್ಸೂಚಿಯಾಗಲಿದೆ.
ಈ ಸಂದರ್ಭದಲ್ಲಿ ಪಕ್ಷದ ಎಲ್ಲ ಮುಖಂಡರು, ಮಹಿಳಾ ಕಾಂಗ್ರೆಸ್ ನ ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮುಂತಾದವರು ಉಪಸ್ಥಿತರಿದ್ದರು.