Breaking News

ಮಹಾನಗರ ಪಾಲಿಕೆ ಆಯುಕ್ತರೇ ಲಂಚಕ್ಕಾಗಿ ಕೈಯೊಡ್ದಿ A.C.B. ಬಲೆಗೆ

Spread the love

ಕಲಬುರ್ಗಿ: ಮಹಾನಗರ ಪಾಲಿಕೆ ಆಯುಕ್ತರೇ ಲಂಚಕ್ಕಾಗಿ ಕೈಯೊಡ್ದಿ ಎಸಿಬಿ ಬಲೆಗೆ ಬಿದ್ದ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.

15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಕಲಬುರ್ಗಿ ಮಹಾನಗರ ಪಾಲಿಕೆ ಆಯುಕ್ತ ಶಂಕ್ರಣ್ಣ ವಣಿಕ್ಯಾಳ ಅವರನ್ನು ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ

 ಕೋವಿಡ್ ಸುರಕ್ಷತಾ ಚಕ್ರದ ಹೆಲ್ಪ್ ಲೈನ್ ನಿರ್ದೇಶಕ ಶರಣಬಸಪ್ಪ ಬಳಿ ಪಾಲಿಕೆ ಆಯುಕ್ತ ಶಂಕ್ರಣ್ಣ 7 ಲಕ್ಷದ 50 ಸಾವಿರ ಬಿಲ್ ಮಾಡಲು ಶೇ.2ರಷ್ಟು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಶರಣಬಸಪ್ಪ ಎಸಿಬಿಗೆ ದೂರು ನೀಡಿದ್ದರು.

ಇದೀಗ ಲಂಚ ಸ್ವೀಕರಿಸುತ್ತಿದ್ದಾಗ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಕಲಬುರ್ಗಿ ಮಹಾನಗರ ಪಾಲಿಕೆ ಆಯುಕ್ತ ಶಂಕ್ರಣ್ಣ ವಣಿಕ್ಯಾಳ ಹಾಗೂ ಅಕೌಂಟೆಂಟ್ ಚನ್ನಪ್ಪ ಇಬ್ಬರನ್ನು ಬಂಧಿಸಿದ್ದಾರೆ


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ