Breaking News

ಹೆಲಿಕಾಪ್ಟರ್‌ನಲ್ಲಿ ಸುತ್ತಿದ ರೈತರು, ಕುರಿಗಾಹಿಗಳು

Spread the love

ಚಿತ್ರದುರ್ಗ: ಸುಮಾರು 200ಕ್ಕೂ ಹೆಚ್ಚು ರೈತರು, ಕುರಿಗಾಹಿಗಳು ವಿವಿಸಾಗರ ಹಿನ್ನೀರು ಪ್ರದೇಶದ ಸೊಬಗನ್ನು ಹೆಲಿಕಾಪ್ಟರ್‌ನಲ್ಲಿ ವೀಕ್ಷಿಸಿ ಸಂಭ್ರಮಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ವಿವಿಸಾಗರ ಹಿನ್ನೀರು ಪ್ರದೇಶದಲ್ಲಿ ಹೆಲಿಟೂರಿಸಂ ಅಭಿವೃದ್ಧಿ ಹಿನ್ನಲೆಯಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಗ್ರಾಮಾಂತರ ಪ್ರದೇಶದ ಜನರನ್ನು ಹೆಲಿಕಾಪ್ಟರ್‌ನಲ್ಲಿ ಸುತ್ತಿಸಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಸುತ್ತಿದ 200ಕ್ಕೂ ಅಧಿಕ ಜನರು ಮಲೆನಾಡನ್ನೇ ನಾಚಿಸುವಂತಹ ಸೊಬಗನ್ನು ಕಂಡು ಬೆರಗಾಗಿದ್ದಾರೆ.

ಈ ಹಿಂದೆ ಹಂಪಿಯಲ್ಲಿ ಹೆಲಿಟೂರಿಸಂ ಆರಂಭಿಸಲಾಗಿತ್ತು. ಆಗ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಐಲ್ಯಾಂಡ್ ನಿರ್ಮಾಣ, ಹೆಲಿಟೂರಿಸಂ ಹಾಗೂ ಬೋಟಿಂಗ್‍ಗೆ ಸಿದ್ಧತೆ ನಡೆದಿತ್ತು. 


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ