Breaking News

ನಾವು ಅಧಿಕಾರಕ್ಕೆ ಬರದೇ ಹೋದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ತೀನಿ: ಸಿಎಂ ಇಬ್ರಾಹಿಂ

Spread the love

ಬೆಂಗಳೂರು: ನಮ್ಮ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತೆ. ನಾವು ಅಧಿಕಾರಕ್ಕೆ ಬರದೇ ಹೋದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ತೀನಿ. ಕಾಂಗ್ರೆಸ್‍ನವರು ಈ ಚಾಲೆಂಜ್ ತಗೋತಾರಾ ಎಂದು ಸಿಎಂ ಇಬ್ರಾಹಿಂ ಪ್ರಶ್ನಿಸುತ್ತಾ ಸವಾಲೆಸೆದಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಪರಿಷತ್ ನಲ್ಲಿ ಹೆಚ್ಚು ಸ್ಥಾನ ಇದ್ದರೂ ಮುಸ್ಲಿಮರಿಗೆ ಯಾಕೆ ವಿಪಕ್ಷ ಸ್ಥಾನ ಕೊಟ್ಟಿಲ್ಲ. ಎರಡನೇ ಅಭ್ಯರ್ಥಿ ಯಾಕೆ ಕಾಂಗ್ರೆಸ್ ಹಾಕಿದ್ದಾರೆ ಅಂತ ಬಂದು ಪ್ರಮಾಣ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲೆಸೆದರು.

ಜೆಡಿಎಸ್ ಅಭ್ಯರ್ಥಿಯನ್ನ ಸೋಲಿಸಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸೋಕೆ ಕಾಂಗ್ರೆಸ್ ಅಭ್ಯರ್ಥಿ ಹಾಕಿದೆ. ಜೆಡಿಎಸ್ 2023 ಕ್ಕೆ ಬರೊಲ್ಲ ಅಂತ ಕಾಂಗ್ರೆಸ್ ಅವರು ಚಾಲೆಂಜ್ ತಗೋತಾರಾ ಎಂದು ಪ್ರಶ್ನಿಸಿದರು. ಎರಡು ಪಕ್ಷಗಳಿಗಿಂತ ಹೆಚ್ಚು ಸ್ಥಾನ ನಾವು ಪಡೆಯುತ್ತೇವೆ. ಇಲ್ಲದೆ ಹೋದರೆ ನಾನು ರಾಜೀನಾಮೆ ನಿವೃತ್ತಿ ಪಡೆಯುತ್ತೇನೆ. ಕಾಂಗ್ರೆಸ್ ಈ ಚಾಲೆಂಜ್ ತೆಗೆದುಕೊಳ್ಳಲಿ ಎಂದು ಹೇಳಿದರು.

ಲೆಹರ್ ಸಿಂಗ್ ಜೊತೆ ಸಿದ್ದರಾಮಯ್ಯ ಡೀಲ್ ಮಾಡಿಕೊಂಡಿದ್ದಾರೆ. ಲೆಹರ್ ಸಿಂಗ್ ಬಿಜೆಪಿ ಅಭ್ಯರ್ಥಿ ಅಲ್ಲ, ಯಡಿಯೂರಪ್ಪ ಅಭ್ಯರ್ಥಿ. ಯಡಿಯೂರಪ್ಪ ಸಿಎಂ ಆಗೋಕೆ ಯಾರು ಕಾರಣ ಎಂದು ಸಿದ್ದರಾಮಯ್ಯ ವಿರುದ್ದ ಇಬ್ರಾಹಿಂ ವಾಗ್ದಾಳಿ ನಡೆಸಿದರು. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ