ಹಾವೇರಿ: ವೇಗವಾಗಿ ಚಲಿಸುತ್ತಿದ್ದ ಸರ್ಕಾರಿ ಬಸ್ ಬೈಕ್ಗೆ ಡಿಕ್ಕಿ ಹೊಡೆದು ರಸ್ತೆ ಪಕ್ಕದ ಹಳ್ಳದಲ್ಲೇ ಉರುಳಿಬಿದ್ದಿರುವ ಘಟನೆ ನಡೆದಿದೆ.
ಜಿಲ್ಲೆಯ ಶಿಗ್ಗಾವಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕಂದಕಕ್ಕೆ ಬಸ್ ಉರುಳಿದ್ದು, ಸದ್ಯ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಾವೇರಿ ಬಸ್ ಡಿಪೋಗೆ ಸೇರಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಉರುಳಿಬಿದ್ದಿದೆ. ಘಟನೆಗೆ ಚಾಲಕನ ಅಜಾಗರೂಕತೆ ಹಾಗೂ ವೇಗದ ಚಾಲನೆಯೇ ಕಾರಣ ಎಂದು ಹೇಳಲಾಗಿದೆ.
ಬಸ್ನಲ್ಲಿದ್ದ ನಾಲ್ಕು ಪ್ರಯಾಣಿಕರು ಗಾಯಗೊಂಡಿದ್ದು, ಬಸ್ ಮುಂದೆ ಚಲಿಸುತ್ತಿದ್ದ ಬೈಕ್ ಸವಾರ ಕೂಡ ಗಾಯಗೊಂಡಿದ್ದಾನೆ.