Breaking News

ಸುಪ್ರೀಂ ಆದೇಶ ಪಾಲಿಸದಿದ್ರೆ ಗುಂಡು ಹಾರಿಸ್ತೀವಿ.:ಮುತಾಲಿಕ್ ಕಿಡಿ

Spread the love

ಹುಬ್ಬಳ್ಳಿ: ಲೌಡ್​ಸ್ಪೀಕರ್​ ಅಳವಡಿಕೆ ಸಂಬಂಧ ಸುಪ್ರೀಂ ಕೋರ್ಟ್​ ನೀಡಿದ ಆದೇಶವನ್ನು ಪಾಲಿಸದವರ ಮೇಲೆ ಗುಂಡು ಹಾರಿಸುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್​ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುತಾಲಿಕ್​, ಒಂದು ವರ್ಷದಿಂದ ಲೌಡ್​ಸ್ಪೀಕರ್​ ವಿರುದ್ಧ ಹೋರಾಟ ಮಾಡುತ್ತಿದ್ದೇವೆ.

ಇಲ್ಲಿಯವರೆಗೆ ಸುಪ್ರೀಂಕೋರ್ಟ್​ ಆದೇಶ ಪಾಲನೆಯಾಗಿಲ್ಲ. ಹಿಂದುಗಳ ಬೆಂಬಲದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರವೂ ನ್ಯಾಯಾಲಯದ ಆದೇಶಕ್ಕೆ ಕಿಮ್ಮತ್ತು ನೀಡಿಲ್ಲ. ಜೂ. 8ರಂದು ಬಿಜೆಪಿಯ ಶಾಸಕರು, ಮಂತ್ರಿಗಳ ಕಚೇರಿ ಎದುರು ಪ್ರತಿಭಟನೆ ಮಾಡುತ್ತೇವೆ. ಸರ್ಕಾರಕ್ಕೆ ನೀಡಿದ್ದ 15 ದಿನಗಳ ಗಡುವು ಮುಗಿದಿದೆ. ಸರ್ಕಾರ ನಮ್ಮ ಸುಪ್ರಭಾತಕ್ಕೆ ಅಡ್ಡಿಪಡಿಸುವ ಕೆಲಸ ಮಾಡಿದೆ. ಧಮ್ಕಿ ಕೂಡ ಹಾಕಿದೆ. ಸರ್ಕಾರದ ಸೊಕ್ಕು ಅಡಗಿಸುವ ತನಕ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.

ಸುಪ್ರೀಂಕೋರ್ಟ್​ ಆದೇಶ ಪಾಲನೆ ಮಾಡದವರ ವಿರುದ್ಧ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂಬುದನ್ನು ಸರ್ಕಾರ ಬಹಿರಂಗ ಪಡಿಸಬೇಕು. ನಿಮಗೆ ಸರ್ಕಾರ ನಡೆಸಲು ಆಗದಿದ್ದರೆ ನಮಗೆ ಕೊಡಿ. ಹೇಗೆ ಸರ್ಕಾರ ನಡೆಸಬೇಕು ಎನ್ನುವುದನ್ನು ತೋರಿಸುತ್ತೇನೆ. ಬಿಜೆಪಿ ನಿಮ್ಮಪ್ಪನದು ಅಲ್ಲ, ನಾವು ರಕ್ತ ಸುರಿಸಿ ಬಿಜೆಪಿ ಕಟ್ಟಿದ್ದೇವೆ. ನಮ್ಮ ಶ್ರಮದಿಂದ ನೀವು ಅಧಿಕಾರ ನಡೆಸುತ್ತಿದ್ದೀರಿ ಎಂದು ಅಧಿಕಾರದಲ್ಲಿರುವವರ ವಿರುದ್ಧ ಮುತಾಲಿಕ್​ ಹರಿಹಾಯ್ದರು.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ