Breaking News

ಸಿದ್ದರಾಮಯ್ಯ ಅವರ ಸುತ್ತಲೂ ಇರುವವರು ಭಯೊತ್ಪಾದಕರು:

Spread the love

ಮೈಸೂರು: ಸಿದ್ದರಾಮಯ್ಯ ಅವರ ಸುತ್ತಲೂ ಇರುವವರು ಭಯೊತ್ಪಾದಕರು ಆದರೂ ಅವರಿಗೆ ಕಾಣುತ್ತಿಲ್ಲ. ಹಾಗಾಗಿ ಅವರಿಗೆ ದೃಷ್ಟಿ ದೋಷವಿರಬಹುದು ಅದನ್ನು ಸರಿಪಡಿಸಿಕೊಳ್ಳಬೇಕೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

 

ಮೈಸೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರ್​ಎಸ್​ಎಸ್​ ನೂರಾರು ವಿದ್ಯಾಸಂಸ್ಥೆಗಳನ್ನು ಕಟ್ಟಿದೆ, ಶುಲ್ಕವಿಲ್ಲದೇ ಕೆಲವು ಕಡೆ ಶಿಕ್ಷಣವನ್ನೂ ನೀಡುತ್ತಿದೆ. ಇವೆಲ್ಲಾ ಅವರಿಗೆ ಕಾಣುವುದಿಲ್ಲ. ನಿಮ್ಮದೇ ಶಾಸಕರ ಮನೆಗೆ ಬೆಂಕಿ ಬಿತ್ತು, ಅವರಿಗೆ ನಿಮ್ಮ ಬೆಂಬಲಿಗರೇ ಜಾಮೀನು ಕೊಡಿಸಿದ್ದಾರೆ. ಹೀಗಾದರೂ ಕಾಣುತ್ತಿಲ್ಲವೆಂದರೆ ನಿಮಗೆ ದೃಷ್ಟಿ ದೋಷವೇ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯನವರಿಗೆ ಚಿಕಿತ್ಸೆ ಅಗತ್ಯವಿದೆ. ಅವರಿಗೆ ವಯಸ್ಸಾಗುತ್ತಿದೆ. ಈಗಲಾದರೂ ಸುಳ್ಳನ್ನು ಹೇಳುವುದನ್ನು ಬಿಡಲಿ, ಆರ್​​ಎಸ್​ಎಸ್​ಗೆ ನಿಮ್ಮ ಸರ್ಟಿಫಿಕೇಟ್​ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ನಿಮ್ಮ ತಪ್ಪಿನ ಅರಿವಾಗಲಿದೆ ಎಂದು ಹೇಳಿದ್ದಾರೆ


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ