ಕಾರವಾರ(ಉತ್ತರಕನ್ನಡ): ವೇಶ್ಯಾವಾಟಿಕೆ ನಡೆಸಲಾಗುತ್ತಿದ್ದ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ ಪೊಲೀಸರು ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿದ ಘಟನೆ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿ ನಡೆದಿದೆ.
ಖಾಸಗಿ ಫಾರ್ಮ್ ಹೌಸ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ ಮುಂಬೈ, ಕೋಲ್ಕತ್ತಾ ಹಾಗೂ ಬಳ್ಳಾರಿ ಮೂಲದ ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ. ಘಟನೆಯಲ್ಲಿ ಮುರುಡೇಶ್ವರದ ತಿಮ್ಮಪ್ಪ ನಾಯ್ಕ ಎಂಬುವರನ್ನು ಬಂಧಿಸಿದ್ದಾರೆ.
ಪ್ರವಾಸಿ ಮಂದಿರದ ಪಕ್ಕದಲ್ಲೇ ಇರುವ ಫಾರ್ಮ್ ಹೌಸ್ನಲ್ಲಿ ಕಳೆದ ಹಲವು ದಿನಗಳಿಂದ ದಂಧೆ ನಡೆಯುತ್ತಿತ್ತು ಎನ್ನಲಾಗ್ತಿದೆ. ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿಯಲ್ಲಿ ಸಿಪಿಐ ವಸಂತ ಆಚಾರಿ, ಪಿಎಸ್ಐ ರವೀಂದ್ರ ಬಿರಾದಾರ, ಸುಧಾ ಅಘನಾಶಿನಿ ಹಾಗೂ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.
Laxmi News 24×7