ಬೆಂಗಳೂರು : ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣೆ ರೋಹಿತ್ ಚಕ್ರತೀರ್ಥ ಸಮಿತಿ ಮುಂದುವರಿಕೆಯಾಗಲಿದ್ದು, ರೋಹಿತ್ ಚಕ್ರತಿರ್ಥರನ್ನು ಪಿಯು ಪಠ್ಯ ಪರಿಷ್ಕರಣೆಗೆ ರಾಜ್ಯ ಸರ್ಕಾರ ನೇಮಕ ಮಾಡಿದೆ.
ದ್ವಿತೀಯ ಪಿಯುಸಿ ಅಧ್ಯಾಯ 4.2 ಹೊಸ ಧರ್ಮಗಳ ಉದಯ ಪಠ್ಯಭಾಗ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಪಠ್ಯದಲ್ಲಿ ನಿರ್ದಿಷ್ಟ ಸಮುದಾಯಗಳ ಭಾವನೆಗಳಿಗೆ ಧಕ್ಕೆಯಾಗುವಂತಹ ವಿಷಯಗಳ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಪಠ್ಯ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ಇನ್ನು ಸರ್ಕಾರ ಇತ್ತೀಚೆಗಷ್ಟೇ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿಸರ್ಜಿಸಿದೆ. ಇದೀಗ ನಿರ್ಗಮಿತ ಅಧ್ಯಕ್ಷ ರೋಹಿತ್ ಚಕ್ರತೀರ್ಥರಿಗೆ ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣೆಯ ಜವಾಬ್ದಾರಿ ನೀಡಲಾಗಿದ್ದು, ಮತ್ತೆ ಪಠ್ಯಪುಸ್ತಕ ದಂಗಲ್ ಶುರುವಾಗಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
Laxmi News 24×7