Breaking News

ಬಾಗಲಕೋಟೆ ಮೂಲದ ಬಿಎಸ್‍ಎಫ್ ಯೋಧ ಅಸ್ಸಾಂನಲ್ಲಿ ರಾತ್ರಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

Spread the love

ಬಾಗಲಕೋಟೆ ಮೂಲದ ಬಿಎಸ್‍ಎಫ್ ಯೋಧ ಅಸ್ಸಾಂನಲ್ಲಿ ರಾತ್ರಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಅಶೋಕ್ ಮುಂಡಾಸ್(41) ಮೃತ ಬಿಎಸ್‍ಎಫ್ ಯೋಧ. ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದ ಅಶೋಕ್ ಅವರು ಬಿಎಸ್‍ಎಫ್ 31 ಬಟಾಲಿಯನ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅಸ್ಸಾಂನ ಬಾಂಗ್ಲಾ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಶನಿವಾರ ರಾತ್ರಿ ಸಿಡಿಲು ಬಡಿದ ರಭಸಕ್ಕೆ ಅಶೋಕ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಅಶೋಕ್ ಅವರು ಬಿಎಸ್‍ಎಫ್‍ನಲ್ಲಿ 16 ವರ್ಷದಿಂದ ಸೇವೆಯಲ್ಲಿದ್ದು, ಈಗ ಪತ್ನಿ, ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಪಾರ್ಥೀವ ಶರೀರ ನಾಳೆ ಬೆಳಗ್ಗೆ ಗ್ರಾಮಕ್ಕೆ ಬರುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ