Breaking News

ಲಾರಿ ಚಕ್ರಕ್ಕೆ ಸಿಲುಕಿ ಮಹಿಳೆ ದೇಹ ಛಿದ್ರ ಛಿದ್ರ

Spread the love

ಚಿಕ್ಕೋಡಿ (ಬೆಳಗಾವಿ ) :ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಸಾವು ಕಂಡ ಘಟನೆ ಚಿಕ್ಕೋಡಿ ಬೆಳಗಾವಿ ರಸ್ತೆಯ ಜೈನಾಪುರ ಬಳಿ ನಡೆದಿದೆ.

ಸದ್ಯ ಮೃತ ಮಹಿಳೆಯ ಹೆಸರು ತಿಳಿದು ಬಂದಿಲ್ಲ.ಅಲ್ಲದೆ,ಇದೇ ಅಪಘಾತದಲ್ಲಿ ದ್ವಿಚಕ್ರ ವಾಹನದ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಚಕ್ರಕ್ಕೆ ಸಿಲುಕಿ ಮಹಿಳೆ ದೇಹ ಛಿದ್ರ ..ಛಿದ್ರ..; ಬೈಕ್ ಸವಾರ ಕಾಲು ನುಜ್ಜುಗುಜ್ಜು..

 

ಅಂದ ಹಾಗೇ ಚಿಕ್ಕೋಡಿ ಬೆಳಗಾವಿ ರಸ್ತೆಯ ಜೈನಾಪುರ ಬಳಿ ದ್ವಿಚಕ್ರ ವಾಹನದ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು,ಅಪಘಾತದಲ್ಲಿ ಲಾರಿ ಚಕ್ರಕ್ಕೆ ಸಿಲುಕಿ ಮಹಿಳೆ ದೇಹ ಛಿದ್ರ ಛಿದ್ರವಾಗಿದೆ. ಉಳಿದಂತೆ ಸವಾರನ ಕಾಲು ನುಜ್ಜುಗುಜ್ಜಾಗಿದ್ದು, ಆತನನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಸಂಬಂಧ ಚಿಕ್ಕೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ