ಬೆಂಗಳೂರು: ಪಿಎಸ್‍ಐ ನೇಮಕಾತಿ ಪ್ರಕರಣದಲ್ಲಿ ಭಾರೀ ಸದ್ದು ಮಾಡಿದ್ದ ಆರೋಪಿ ದರ್ಶನ್ ಗೌಡನನ್ನು ಸಿಐಡಿ ಬಂಧಿಸಿದೆ.
ಪಿಎಸ್‍ಐ ನೇಮಕಾತಿ ಪ್ರಕರಣದ ವಿಚಾರಣೆ ವೇಳೆ ಸಚಿವ ಅಶ್ವಥ್ ನಾರಾಯಣ್ ಹಾಗೂ ಅವರ ಸಹೋದರ ಸತೀಶ್ ಹೆಸರು ಹೇಳಿದ್ದ ದರ್ಶನ್‍ಗೌಡನನ್ನು ನಿನ್ನೆ ವಶಕ್ಕೆ ಪಡೆದಿದ್ದ ಸಿಐಡಿ ಪೊಲೀಸರು ಇಂದು ಬಂಧಿಸಿರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ಜೊತೆಗೆ ಕೋರಮಂಗಲದಲ್ಲಿ ನೆಲಮಂಗಲ ಕಾನ್ಸ್‌ಸ್ಟೇಬಲ್ ಮೋಹನ್ ಕುಮಾರ್ ಹಾಗೂ ರಾಮಮೂರ್ತಿನಗರ ಪೊಲೀಸರು ಹರೀಶ್‍ನನ್ನು ಬಂಧಿಸಿದ್ದಾರೆ.
ಪ್ರತ್ಯೇಕವಾಗಿ ಮೂರು ಕೇಸ್ ದಾಖಲಿಸಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಬೆಂಗಳೂರಿನ ರಾಮಮೂರ್ತಿನಗರ, ಕೋರಮಂಗಲ ಠಾಣೆ, ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಪ್ರತ್ಯೇಕ ಕೇಸ್ ದಾಖಲಿಸಿದ್ದಾರೆ.
Laxmi News 24×7